ಪಹಣಿಯಲ್ಲಿ ವಕ್ಫ್‌: ಸಿಬಿಐ ತನಿಖೆಗೆ ಒತ್ತಾಯ

| Published : Nov 05 2024, 12:46 AM IST

ಸಾರಾಂಶ

ಕೇವಲ ಒಂದು ಸಮುದಾಯವನ್ನುಮತ ಬ್ಯಾಂಕ್ ಗಾಗಿ ಒಲಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆ ತೋರುತ್ತಿದೆ. ಸರ್ಕಾರ 1974ರ ಹಳೆಯ ಗಜೆಟ್ ಮುಂದಿಟ್ಟುಕೊಂಡು ವಕ್ಫ್ ಬೋರ್ಡ್ ದೀನ ದಲಿತರ ಜಮೀನು ಪಡೆಯಲು ನೋಟಿಸ್ ಜಾರಿ ಮಾಡಲಾಗಿದೆ. ಇದರ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಬೇಕು.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ರಾಜ್ಯದಲ್ಲಿ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಸುತ್ತಿರುವುದನ್ನು ವಿರೋಧಿಸಿ, ವಕ್ಸ್ ಆಸ್ತಿ ಕುರಿತ ಗೆಜೆಟ್‌ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಮತ್ತು ವಿವಾದಕ್ಕೆ ಕಾರಣವಾದ ಸಚಿವ ಜಮೀ‌ರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂಬ ಆಗ್ರಹಿಸಿ ಸೋಮವಾರ ಬಿಜೆಪಿ ನಗರದ ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಪ್ರತಿಭಟನಾಕಾರರು ಸಚಿವ ಜಮೀರ್ ಆಹಮದ್, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರತಿಕೃತಿ ದಹಿಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ಸಿಎಂಗೆ ಮುಸ್ಲಿಂ ಭೂತ ಹಿಡಿದಿದೆ

ಬಿಜೆಪಿ ರಾಜ್ಯ ಕಾರ್ಯದರ್ಶಿ ಸಿ.ಮುನಿರಾಜು ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ, ವಕ್ಫ್ ಬೋರ್ಡ್ ಹೆಸರಿಗೆ ಹೋಗಿರುವ ರೈತರ ಭೂಮಿ ವಾಪಸ್ ರೈತರಿಗೆ ಸಿಗಬೇಕು. ಅನ್ನದಾತನಿಗೆ ಖನ್ನ ಹಾಕುವ ಕೆಲಸ ಜಮೀರ್ ಟೀಂ ಮತ್ತು ಸಿದ್ದರಾಮಯ್ಯ ಮಾಡಿದ್ದಾರೆ. ಸಿದ್ದರಾಮಯ್ಯಗೆ ಮುಸ್ಲಿಂ ಭೂತ ಹಿಡಿದಿದೆ. ರಾಜ್ಯದಲ್ಲಿ ದೇವಸ್ಥಾನಗಳ ಭೂಮಿಯನ್ನು ಮತ್ತು ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಘೋಷಣೆ ಮಾಡಿ ಕಬರಸ್ತಾನಗಳಿಗೆ ಬಳಸುತ್ತಿದ್ದಾರೆ ಎಂದು ಆರೋಪಿಸಿದರು.

ಕೇವಲ ಒಂದು ಸಮುದಾಯವನ್ನುಮತ ಬ್ಯಾಂಕ್ ಗಾಗಿ ಒಲಿಸಿಕೊಳ್ಳಲು ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಧೋರಣೆ ತೋರುತ್ತಿದೆ. ಸರ್ಕಾರ 1974ರ ಹಳೆಯ ಗಜೆಟ್ ಮುಂದಿಟ್ಟುಕೊಂಡು ವಕ್ಫ್ ಬೋರ್ಡ್ ದೀನ ದಲಿತರ ಜಮೀನು ಪಡೆಯಲು ನೋಟಿಸ್ ಜಾರಿ ಮಾಡಲಾಗಿದೆ. ಇದರ ವಿರುದ್ಧ ಬೀದಿಗಿಳಿದು ಹೋರಾಟ ನಡೆಸಬೇಕು ಎಂದರು.ಸಚಿವ ಜಮೀರ್‌ ವಜಾಗೆ ಆಗ್ರಹ

ಬಿಜೆಪಿ ಮುಖಂಡ ಸೀಕಲ್ ರಾಮಚಂದ್ರಗೌಡ ಮಾತನಾಡಿ, ಜಮೀರ್ ಅಹ್ಮದ್ ಒಬ್ಬ ಮತಾಂಧ. ಕರ್ನಾಟಕವನ್ನು ಪಾಕಿಸ್ತಾನ ಮಾಡಲು ಹೊರಟಿದ್ದಾರೆ. ಜಮೀರ್ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ಇಲ್ಲದಿದ್ದರೆ ಜನರೇ ಕಾಂಗ್ರೆಸ್ ಸರ್ಕಾರವನ್ನು ವಜಾಗೊಳಿಸಲಿದ್ದಾರೆ ಎಂದರು.

ರೈತರ ಪರ ಹೋರಾಟ

ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ಮಾತನಾಡಿ, ರಾಜ್ಯ ಸರ್ಕಾರ ರೈತರ ಜಮೀನುಗಳನ್ನು ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಸುತ್ತಿರುವುದರ ವಿರುದ್ಧ ನಮ್ಮ ಹೋರಾಟ ನಿರಂತವಾಗಿ ನಡೆಯಲಿದೆ ಎಂದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಂ.ರಾಜಣ್ಣ, ವಕೀಲರ ಪ್ರಕೋಷ್ಟದ ಜಿಲ್ಲಾಧ್ಯಕ್ಷ ಶ್ರೀನಿವಾಸ್, ಬಿಜೆಪಿ ಜಿಲ್ಲಾ ಉಪಾದ್ಯಕ್ಷ ಮರಳುಕುಂಟೆ ಕೃಷ್ಣಮೂರ್ತಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಹೆಚ್.ಎಸ್.ಮುರಳೀಧರ, ಕೆ.ಬಿ.ಮುರಳಿ, ಮಧು ಸೂರ್ಯನಾರಾಯಣರೆಡ್ಡಿ, ನಿರ್ಮಲ, ಅನು ಆನಂದ್, ಸೀಕಲ್ ಆನಂದಗೌಡ, ಸುರೇಂದ್ರಗೌಡ, ವೇಣುಗೋಪಾಲ್ ಮತ್ತಿತರರು ಇದ್ದರು..