ಡಿಕೆಶಿಗೆ ಅಧಿಕಾರದ ಮದವೇರಿದೆ - ವಿಜಯೇಂದ್ರ : ನನ್ನ ಮದ ಇಳಿಸಲಿ - ಡಿಕೆಶಿ ಸವಾಲು

| N/A | Published : Mar 21 2025, 10:36 AM IST

dk shivakumar
ಡಿಕೆಶಿಗೆ ಅಧಿಕಾರದ ಮದವೇರಿದೆ - ವಿಜಯೇಂದ್ರ : ನನ್ನ ಮದ ಇಳಿಸಲಿ - ಡಿಕೆಶಿ ಸವಾಲು
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ದರಿದ್ರ, ಜನವಿರೋಧಿ, ಕೆಟ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ನಾಡಿನ ಜನತೆಗೆ ಕೊಟ್ಟ ಏಕೈಕ ಗ್ಯಾರಂಟಿ ಎಂದರೆ ಅದು ಬೆಲೆ ಏರಿಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಪಾದಿಸಿದ್ದಾರೆ.

  ಬೆಂಗಳೂರು : ರಾಜ್ಯದಲ್ಲಿ ದರಿದ್ರ, ಜನವಿರೋಧಿ, ಕೆಟ್ಟ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಈ ನಾಡಿನ ಜನತೆಗೆ ಕೊಟ್ಟ ಏಕೈಕ ಗ್ಯಾರಂಟಿ ಎಂದರೆ ಅದು ಬೆಲೆ ಏರಿಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಪಾದಿಸಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ವಿಫಲವಾಗಿದೆ. ಅಧಿಕಾರದ ಮದ, ಭ್ರಮೆ ಇವರ ನೆತ್ತಿಗೇರಿದೆ. ಹೇಳಿ ಕೇಳಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೇಶದ ಎರಡನೇ ಅತಿ ಶ್ರೀಮಂತ ಶಾಸಕ ಎಂದು ವ್ಯಂಗ್ಯವಾಡಿದರು.

ಬೆಲೆ ಏರಿಕೆಯಿಂದ ನಾಡಿನ ಸಾಮಾನ್ಯ ಜನರು, ಬಡವರು, ರೈತರು ಸೇರಿ ಎಲ್ಲರೂ ತತ್ತರಿಸಿ ಹೋಗಿದ್ದಾರೆ. ಇವರ ಹುಳುಕು ಮುಚ್ಚಿ ಹಾಕಲು ಪದೇಪದೆ ಕೇಂದ್ರ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಒಂದು ಕಡೆ ಪುಕ್ಕಟೆ ವಿದ್ಯುತ್ ಎನ್ನುತ್ತಾರೆ. ರಾಜ್ಯದಲ್ಲಿ ರೈತರು ಸಂಕಷ್ಟದಲ್ಲಿದ್ದಾರೆ. 3 ಫೇಸ್ ವಿದ್ಯುತ್ತನ್ನು 7 ತಾಸು ಕೊಡಲು ಸರ್ಕಾರಕ್ಕೆ ಆಗುತ್ತಿಲ್ಲ. ಮತ್ತೊಂದು ಕಡೆ ಪಿಡಬ್ಲ್ಯುಡಿ ಮತ್ತಿತರ ಇಲಾಖೆಗಳು 6500 ಕೋಟಿ ರು. ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. ಜನರಿಗೆ ಬರೆ ಎಳೆಯುವ ಸರಕಾರದ ಕ್ರಮ ಅಕ್ಷಮ್ಯ ಅಪರಾಧ ಎಂದರು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ವಿಜಯೇಂದ್ರ, ಸ್ಮಾರ್ಟ್ ಮೀಟರ್, ವಿದ್ಯುತ್ ದರ ಏರಿಕೆ, ಮೆಟ್ರೋ ದರ ಮತ್ತಿತರ ಬೆಲೆ ಏರಿಕೆ ಮತ್ತಿತರ ವಿಚಾರವನ್ನು ಚರ್ಚಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ. ಅಲ್ಪಸಂಖ್ಯಾತರ ಓಲೈಕೆಗೆ ಹೊರಟಿದೆ. ಮೇಕೆದಾಟು ಎಂದು ತಿಳಿಸಿ ಅಧಿಕಾರಕ್ಕೆ ಬಂದಿದ್ದಾರೆ. ಏನು ಮಾಡಿದ್ದಾರೆಂದು ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನಿಸಬೇಕಿದೆ ಎಂದರು.

ವಿಜಯೇಂದ್ರ ನನ್ನ ಮದ

ಇಳಿಸಲಿ: ಡಿಕೆಶಿ ಸವಾಲು

ಬೆಂಗಳೂರು: ಯುವ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮಂಡ್ಯ ನಾಯಕರನ್ನು ಛತ್ರಿಗಳು ಎಂದು ಕರೆದಿದ್ದಕ್ಕೆ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನನಗೆ ಅಧಿಕಾರದ ಮದ ಎಂದು ಹೇಳಿಕೆ ನೀಡಿದ್ದಾರೆ. ನನಗೆ ಮದವೇರಿದ್ದರೆ, ಅವರು ಇಳಿಸಲಿ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಹೇಳಿದರು.

ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಶಿವಕುಮಾರ್‌, ‘ನನಗೆ ಬೇಕಾದವರನ್ನು ನಾನು ಪ್ರೀತಿಯಿಂದ ಏನು ಬೇಕಾದರೂ ಕರೆಯುತ್ತೇನೆ. ಅದಕ್ಕೆ ಇವರದ್ದೇನು?. ಕೆಲವರು ತಮ್ಮ ಆಪ್ತರನ್ನು ‘ಕಳ್ಳ ನನ್ನ ಮಗನೇ‘ ಎಂದು ಕರೆಯುತ್ತಾರೆ. ಅದು ನಮ್ಮ ನಡುವಿನ ಬಾಂಧವ್ಯದ ವಿಚಾರ’ ಎಂದರು.