ಸಾರಾಂಶ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಷಯ ಎಲ್ಲರೂ ಕುಳಿತುಕೊಂಡು ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ
ಶಿವಮೊಗ್ಗ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿಷಯ ಎಲ್ಲರೂ ಕುಳಿತುಕೊಂಡು ಮಾತನಾಡಿ ಬಗೆಹರಿಸಿಕೊಳ್ಳುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುನರುಚ್ಚರಿಸಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪರಸ್ಪರ ಕಚ್ಚಾಡುವುದರಿಂದ ಯಾರಿಗೂ ಲಾಭ ಇಲ್ಲ. ಈ ಅಧಿವೇಶನದಲ್ಲಿ ಎಲ್ಲರೂ ಒಟ್ಟಾಗಿ ರಾಜ್ಯ ಸರ್ಕಾರದ ವೈಫಲ್ಯ ವಿರುದ್ಧ ಹೋರಾಟ ಮಾಡಬೇಕು. ಈ ನಿಟ್ಟಿನಲ್ಲಿ ಮುನ್ನಡೆಯುವ ವಿಶ್ವಾಸ ನಮ್ಮೆಲ್ಲರಿಗೂ ಇದೆ ಎಂದರು.
ಸಿಎಂ ವಿರುದ್ದ ಇ.ಡಿ. ತನಿಖೆ ಬಗ್ಗೆ ಮಾತನಾಡಿದ ಬಿಎಸ್‌ವೈ, ಇ.ಡಿ.ಗೆ ಪೂರ್ತಿ ಅಧಿಕಾರ ಇದೆ. ಇ.ಡಿ. ಏನು ತೀರ್ಮಾನ ತೆಗೆದುಕೊಳ್ಳುತ್ತದೆ ಅದೇ ಅಂತಿಮ. ಸಿಎಂ ವಿರುದ್ಧ ಸಾಕ್ಷ್ಯಾಧಾರಗಳು ಸಿಕ್ಕಿವೆ. ಅದಕ್ಕೆ ಈ ರೀತಿ ಹೇಳಿಕೆ ಕೊಡುತ್ತಿದ್ದಾರೆ. ಸಿಎಂ ಆಗಿ ಇ.ಡಿ.ಗೆ ಗೌರವ ಕೊಡುವುದನ್ನು ಕಲಿಯಬೇಕು ಎಂದರು.