ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಸಂಘರ್ಷ ಶೀಘ್ರವೇ ಇತ್ಯರ್ಥವಾಗಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ನವದೆಹಲಿ : ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಡುವೆ ನಡೆಯುತ್ತಿರುವ ಸಂಘರ್ಷ ಶೀಘ್ರವೇ ಇತ್ಯರ್ಥವಾಗಲಿದೆ. ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಜತೆ ಚರ್ಚಿಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಸಂಘರ್ಷ ನಡೆಯುತ್ತಿರುವುದನ್ನು ಒಪ್ಪಿಕೊಂಡರು
ದೆಹಲಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಅವರು ಮಾತನಾಡಿ. ಸಿಎಂ ಬದಲಾವಣೆ ಕುರಿತಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ನಡುವೆ ಸಂಘರ್ಷ ನಡೆಯುತ್ತಿರುವುದನ್ನು ಒಪ್ಪಿಕೊಂಡರು. ‘ನಾನು, ರಾಹುಲ್ ಜಿ ಮತ್ತು ಸೋನಿಯಾ ಜಿ ಒಟ್ಟಾಗಿ ಕೂತು, ಚರ್ಚಿಸಿ, ಈ ವಿಷಯದ ಬಗ್ಗೆ ನಿರ್ಧಾರ ತೆಗೆದುಕೊಳ್ಳುತ್ತೇವೆ. ಸಮಸ್ಯೆಯನ್ನು ಆದಷ್ಟು ಶೀಘ್ರ ಪರಿಹರಿಸುತ್ತೇವೆ. ‘ಪ್ರತಿಯೊಂದು ಸಮಸ್ಯೆಗೂ ಪರಿಹಾರ ಇದ್ದೇ ಇರುತ್ತೆ’ ಎಂದರು.
ಸಮಸ್ಯೆ ಇತ್ಯರ್ಥಕ್ಕೆ ಕ್ರಮ
ಹೀಗಾಗಿ, ಸಮಸ್ಯೆ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳುತ್ತೇವೆ. ಸಮಸ್ಯೆ ಇತ್ಯರ್ಥಕ್ಕೆ ಏನು ಕ್ರಮ ಕೈಗೊಳ್ಳಬಹುದು ಎಂಬುದನ್ನು ಒಟ್ಟಾಗಿ ಕೂತು ಚರ್ಚಿಸಿ, ಪರಿಹಾರ ಕಂಡುಕೊಳ್ಳುತ್ತೇವೆ’ ಎಂದು ತಿಳಿಸಿದರು.
