ಕಾನೂನು ತಿದ್ದುಪಡಿ ಮಾಡಿದರೆ ಉಗ್ರ ಚಳವಳಿ: ಪ್ರಹ್ಲಾದ ಜೋಶಿ ಎಚ್ಚರಿಕೆ

| Published : Feb 25 2024, 01:45 AM IST / Updated: Feb 25 2024, 02:30 PM IST

Prahlada Joshi
ಕಾನೂನು ತಿದ್ದುಪಡಿ ಮಾಡಿದರೆ ಉಗ್ರ ಚಳವಳಿ: ಪ್ರಹ್ಲಾದ ಜೋಶಿ ಎಚ್ಚರಿಕೆ
Share this Article
  • FB
  • TW
  • Linkdin
  • Email

ಸಾರಾಂಶ

ದೇವಸ್ಥಾನದ ಹಣವನ್ನು ರಾಜ್ಯ ಸರ್ಕಾರ ಲೂಟಿ ಹೊಡೆಯಲು ಹುನ್ನಾರ ನಡೆಸಿದೆ. ವಿಧಾನಪರಿಷತ್‌ನಲ್ಲಿ ಈ ಮಸೂದೆಯನ್ನು ಸೋಲಿಸಿದ್ದೇವೆ. ಇಷ್ಟಕ್ಕೂ ಮೀರಿ ಕಾನೂನು ಜಾರಿಗೊಳಿಸಿದರೆ ಅದರ ವಿರುದ್ಧ ರಾಜ್ಯಾದ್ಯಂತ ಉಗ್ರ ಸ್ವರೂಪದ ಹೋರಾಟ ನಡೆಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಎಚ್ಚರಿಕೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ

ದೇವಸ್ಥಾನದ ಹಣವನ್ನು ರಾಜ್ಯ ಸರ್ಕಾರ ಲೂಟಿ ಹೊಡೆಯಲು ಹುನ್ನಾರ ನಡೆಸಿದೆ. ವಿಧಾನಪರಿಷತ್‌ನಲ್ಲಿ ಈ ಮಸೂದೆಯನ್ನು ಸೋಲಿಸಿದ್ದೇವೆ. ಇಷ್ಟಕ್ಕೂ ಮೀರಿ ಕಾನೂನು ಜಾರಿಗೊಳಿಸಿದರೆ ಅದರ ವಿರುದ್ಧ ರಾಜ್ಯಾದ್ಯಂತ ಉಗ್ರ ಸ್ವರೂಪದ ಹೋರಾಟ ನಡೆಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ, ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದು ಬರೀ 9 ತಿಂಗಳಾಗಿವೆ. ಅಷ್ಟರಲ್ಲೇ 1 ಲಕ್ಷ ಕೋಟಿಗೂ ಅಧಿಕ ಸಾಲ ಮಾಡಿದೆ. ಹೀಗಾಗಿ, ಆರ್ಥಿಕ ದಿವಾಳಿತನ ಎದುರಿಸುವಂತಾಗಿದೆ. 

ಈ ಹಿನ್ನೆಲೆಯಲ್ಲಿ ಇದೀಗ ಸರ್ಕಾರ ಹಿಂದೂಗಳ ದೇವಾಲಯಗಳ ಮೇಲೆ ಕಣ್ಣು ಹಾಕಿದೆ. ವಿಧಾನಸಭೆಯಲ್ಲಿ ಈ ಸಂಬಂಧ ಮಸೂದೆಯನ್ನು ಪಾಸು ಮಾಡಿಕೊಂಡಿದೆ. 

ಆದರೆ, ವಿಧಾನಪರಿಷತ್‌ನಲ್ಲಿ ಮಸೂದೆ ಪಾಸಾಗದಂತೆ ಬಿಜೆಪಿ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈಗಲೇ ಈ ಯೋಚನೆಯನ್ನು ಕೈಬಿಡಬೇಕು. ಇಷ್ಟಾಗಿಯೂ ಏನಾದರೂ ಕಾನೂನು ಜಾರಿಗೊಳಿಸಲು ಪ್ರಯತ್ನಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಧಾರವಾಡದಲ್ಲಿ ಬಿಜೆಪಿ ಐತಿಹಾಸಿಕ ಜಯ: ಇದಕ್ಕೂ ಮೊದಲು ಧಾರವಾಡದಲ್ಲಿ ಲೋಕಸಭಾ ಚುನಾವಣಾ ಕಚೇರಿ ಉದ್ಘಾಟಿಸಿ ಮಾತನಾಡಿ, ಧಾರವಾಡದಲ್ಲಿ ಬಿಜೆಪಿ ಐತಿಹಾಸಿಕ ವಿಜಯ ದಾಖಲಿಸುತ್ತದೆ. 

ಮೋದಿ ಅವಧಿಯಲ್ಲಿ ಈ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಆಗಿದೆ. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ಬಿಜೆಪಿ ಈ ಕ್ಷೇತ್ರದಲ್ಲಿ ಗೆಲುವು ಸಾಧಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೇಲ್ಮನೆಯಲ್ಲಿ ಸೋಲಿಸಿದ್ದೇವೆ: ವಿಧಾನಪರಿಷತ್‌ನಲ್ಲಿ ಮಸೂದೆ ಪಾಸಾಗದಂತೆ ಬಿಜೆಪಿ ನೋಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಈಗಲೇ ಈ ಯೋಚನೆಯನ್ನು ಕೈಬಿಡಬೇಕು. ಇಷ್ಟಾಗಿಯೂ ಏನಾದರೂ ಕಾನೂನು ಜಾರಿಗೊಳಿಸಲು ಪ್ರಯತ್ನಿಸಿದರೆ ಉಗ್ರ ಹೋರಾಟ ಮಾಡಬೇಕಾಗುತ್ತದೆ.- ಪ್ರಹ್ಲಾದ್‌ ಜೋಶಿ ಕೇಂದ್ರ ಸಚಿವ