ಸ್ಟಾಂಪ್‌ ಪೇಪರಲ್ಲಿ ಬರೆದುಕೊಡುವೆ ಸಿದ್ದು 5 ವರ್ಷ ಸಿಎಂ: ದರ್ಶನಾಪುರ

| N/A | Published : Oct 13 2025, 06:19 AM IST

Sharanabasappa Darshanapur
ಸ್ಟಾಂಪ್‌ ಪೇಪರಲ್ಲಿ ಬರೆದುಕೊಡುವೆ ಸಿದ್ದು 5 ವರ್ಷ ಸಿಎಂ: ದರ್ಶನಾಪುರ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‌ಸಿಎಂ ಬದಲಾವಣೆ ಆಗುವುದಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಐದು ವರ್ಷ ಅಧಿಕಾರ ಪೂರೈಸುತ್ತಾರೆ. ಬೇಕಿದ್ದರೆ, ಸ್ಟಾಂಪ್ ಪೇಪರ್ ಮೇಲೆ ಬರೆದು ಕೊಡುತ್ತೀನಿ ಎಂದು ಸಚಿವ ದರ್ಶನಾಪುರ ತಿಳಿಸಿದ್ದಾರೆ.

 ಯಾದಗಿರಿ  : ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ‌ಸಿಎಂ ಬದಲಾವಣೆ ಆಗುವುದಿಲ್ಲ. ಸಿದ್ದರಾಮಯ್ಯ ಅವರೇ ಸಿಎಂ ಆಗಿ ಐದು ವರ್ಷ ಅಧಿಕಾರ ಪೂರೈಸುತ್ತಾರೆ. ಬೇಕಿದ್ದರೆ, ಸ್ಟಾಂಪ್ ಪೇಪರ್ ಮೇಲೆ ಬರೆದು ಕೊಡುತ್ತೀನಿ ಎಂದು ಸಚಿವ ದರ್ಶನಾಪುರ ತಿಳಿಸಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಸಿಎಂ ಬದಲಾವಣೆ ಕುರಿತು ಪ್ರತಿಕ್ರಿಯಿಸಿ, ಐದು ವರ್ಷ ಸಿಎಂ ಆಗಿ ನಾನೇ ಇರುತ್ತೇನೆ ಎಂದು ಸಿದ್ದರಾಮಯ್ಯನವರೇ ಹೇಳಿದ್ದಾರೆ, ಡಿಕೆಶಿ ಕೂಡ ಇದೇ ಮಾತನ್ನು ಹೇಳಿದ್ದಾರೆ. ಹೈಕಮಾಂಡ್‌ ಕೂಡ ಎಲ್ಲಿಯೂ ಸಿಎಂ ಬದಲಾವಣೆ ಮಾಡುವುದಾಗಿ ಹೇಳಿಲ್ಲ ಎಂದರು.

ಸಚಿವ ಸಂಪುಟ ಪುನರ್ ರಚನೆ ಕುರಿತು ಪ್ರತಿಕ್ರಿಯಿಸಿ, ಸಂಪುಟ ಪುನಾರಚನೆ ಸಿಎಂ ಪರಮಾಧಿಕಾರ. ಸಿಎಂ ಅವರು ಯಾವಾಗ ಬೇಕಾದರೂ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬಹುದು ಎಂದರು.

Read more Articles on