ಸಾರಾಂಶ
ಬಿಜೆಪಿಯ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀ ನಾಮೆ ನೀಡಿರುವ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆಯಿದ್ದು, ಕಾಂಗ್ರೆಸ್ ಪಕ್ಷ ಸೇರಿದರೆ ಅವರೇ ಅಭ್ಯರ್ಥಿಯಾಗುವುದು ನಿಶ್ಚಿತ ಎಂದು ತಿಳಿದುಬಂದಿದೆ.
ಬೆಂಗಳೂರು: ಬಿಜೆಪಿಯ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀ ನಾಮೆ ನೀಡಿರುವ ಸಿ.ಪಿ. ಯೋಗೇಶ್ವರ್ ಕಾಂಗ್ರೆಸ್ ಪಕ್ಷ ಸೇರುವ ಸಾಧ್ಯತೆಯಿದ್ದು, ಕಾಂಗ್ರೆಸ್ ಪಕ್ಷ ಸೇರಿದರೆ ಅವರೇ ಅಭ್ಯರ್ಥಿಯಾಗುವುದು ನಿಶ್ಚಿತ ಎಂದು ತಿಳಿದುಬಂದಿದೆ.
ಚನ್ನಪಟ್ಟಣ ಎನ್‌ಡಿಎ ಟಿಕೆಟ್ ಜೆಡಿಎಸ್ ಪಕ್ಷಕ್ಕೆ ಎಂಬುದು ಅಂತಿಮವಾಗಿದೆ. ಜೆಡಿಎಸ್‌ನಿಂದ ಯೋಗೇಶ್ವರ್‌ಗೆ ಟಿಕೆಟ್ ನೀಡಲು ತೀವ್ರ ವಿರೋಧವಿದೆ.
ಈ ಹಿನ್ನೆಲೆಯಲ್ಲಿ ಯೋಗೇಶ್ವರ್ ಮುಂದಿನ ನಡೆ ಕುತೂಹಲ ಮೂಡಿಸಿದೆ. ಮೂಲಗಳ ಪ್ರಕಾರ ಅವರು ಕಾಂಗ್ರೆಸ್ ಪಕ್ಷಕ್ಕೆ ವಾಪಸಾಗುವ ಸಾಧ್ಯತೆ ಹೆಚ್ಚು ಇದೆ. ಈ ಬಗ್ಗೆ ಸೋಮವಾರವೇ ಚರ್ಚೆಯಾಗಬೇಕಾಗಿತ್ತು. ಆದರೆ ಮುಖ್ಯಮಂತ್ರಿಗಳು ಲಭ್ಯವಿಲ್ಲದ ಕಾರಣ ಮಂಗಳವಾರ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳು ಈ ಬಗ್ಗೆ ಸಭೆ ನಡೆಸಲಿದ್ದಾರೆ. ಬಳಿಕ ಯೋಗೇಶ್ವರ್ ಪಕ್ಷ ಸೇರ್ಪಡೆ ಅಂತಿಮವಾಗಲಿದೆ ಎನ್ನಲಾಗಿದೆ. ಒಂದೊಮ್ಮೆ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾದರೆ ಅವರೇ ಅಭ್ಯರ್ಥಿಯಾಗಲಿದ್ದಾರೆ. ಡಿ.ಕೆ.ಸುರೇಶ್, ಪುಟ್ಟಣ್ಣ ಸೇರಿದಂತೆ ಎಲ್ಲರೂ ಅವರ ಗೆಲುವಿಗಾಗಿ ಶ್ರಮಿಸುವಂತೆ ಸಭೆ ನಡೆಸಿ ಪಕ್ವ ಸೂಚನೆ ನೀಡುವ ಸಾಧ್ಯತೆಯಿದೆ.