ದಸರಾ: ರಾಜವಂಶಸ್ಥರಿಗೆ ಆಹ್ವಾನ

| Published : Oct 14 2023, 01:00 AM IST / Updated: Oct 14 2023, 01:01 AM IST

ಸಾರಾಂಶ

ದಸರಾ: ರಾಜವಂಶಸ್ಥರಿಗೆ ಆಹ್ವಾನ
ಫೋಟೋ- 13ಎಂವೈಎಸ್‌81 ಕನ್ನಡಪ್ರಭ ವಾರ್ತೆ ಮೈಸೂರು ನಾಡಹಬ್ಬ ಮೈಸೂರು ದಸರಾ ಉತ್ಸವದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು. ಶುಕ್ರವಾರ ಅರಮನೆಯ ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲತಾಂಬೂಲ ನೀಡಿ ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸಿ, ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನದ ಚೆಕ್ ನೀಡಿದರು. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಡಾ.ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಶಾಸಕ ಟಿ.ಎಸ್‌. ಶ್ರೀವತ್ಸ, ಮೇಯರ್ ಶಿವಕುಮಾರ್, ಉಪ ಮೇಯರ್ ಡಾ.ಜಿ. ರೂಪಾ, ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ, ನಗರ ಪೊಲೀಸ್ ಆಯುಕ್ತ ಬಿ. ರಮೇಶ್, ಎಡಿಸಿ ಪಿ. ಶಿವರಾಜು, ಅರಮನೆ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ, ಅರಮನೆ ಎಸಿಪಿ ಎಚ್.ಎಂ. ಚಂದ್ರಶೇಖರ್ ಮೊದಲಾದವರು ಇದ್ದರು. -