‘ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಭೂ-ವಿವರ ನೋಂದಾಯಿಸಿ’
KannadaprabhaNewsNetwork | Published : Oct 28 2023, 01:15 AM IST / Updated: Oct 28 2023, 01:16 AM IST
‘ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ಭೂ-ವಿವರ ನೋಂದಾಯಿಸಿ’
ಸಾರಾಂಶ
ಸರ್ಕಾರದ ಯಾವುದೇ ಸವಲತ್ತು ಪಡೆಯಲು ಫ್ರೂಟ್ಸ್ ತಂತ್ರಾಂಶದ ನೋಂದಣಿಯು ಕಡ್ಡಾಯವಾಗಿದ್ದು, ಕೂಡಲೇ ಎಲ್ಲಾ ರೈತರು ತಮ್ಮ ಮಾಲೀಕತ್ವಕ್ಕೆ ಒಳಪಡುವ ಎಲ್ಲಾ ಸರ್ವೆ ನಂಬರ್‌ಗಳನ್ನು (ಭೂ ಹಿಡುವಳಿಯನ್ನು) ಸಂಬಂಧಪಟ್ಟ ದಾಖಲಾತಿಯೊಂದಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡುವಂತೆ ತೋಟಗಾರಿಕೆ ಇಲಾಖೆ ಮನವಿ ಮಾಡಿದೆ. ಪ್ರೂಟ್ಸ್ ತಂತ್ರಾಂಶದಲ್ಲಿ ರೈತರ ವೈಯಕ್ತಿಕ ಮಾಹಿತಿ, ಜಮೀನಿನ, ಬೆಳೆಯ ವಿವರ ಹಾಗೂ ಈ ಹಿಂದೆ ಸರ್ಕಾರದಿಂದ ಪಡೆದ ಎಲ್ಲಾ ಇಲಾಖೆಗಳ ಸವಲತ್ತಿನ ವಿವರ ಒಳಗೊಂಡಿರುತ್ತದೆ
ಸರ್ಕಾರದ ಸವಲತ್ತುಗಳನ್ನು ಪಡೆಯಲು ನೋಂದಣಿ ಕಡ್ಡಾಯ । ತೋಟಗಾರಿಕೆ ಇಲಾಖೆಯಿಂದ ಮನವಿ ಕನ್ನಡಪ್ರಭ ವಾರ್ತೆ ಚಾಮರಾಜನಗರ ಸರ್ಕಾರದ ಯಾವುದೇ ಸವಲತ್ತು ಪಡೆಯಲು ಫ್ರೂಟ್ಸ್ ತಂತ್ರಾಂಶದ ನೋಂದಣಿಯು ಕಡ್ಡಾಯವಾಗಿದ್ದು, ಕೂಡಲೇ ಎಲ್ಲಾ ರೈತರು ತಮ್ಮ ಮಾಲೀಕತ್ವಕ್ಕೆ ಒಳಪಡುವ ಎಲ್ಲಾ ಸರ್ವೆ ನಂಬರ್‌ಗಳನ್ನು (ಭೂ ಹಿಡುವಳಿಯನ್ನು) ಸಂಬಂಧಪಟ್ಟ ದಾಖಲಾತಿಯೊಂದಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಣಿ ಮಾಡುವಂತೆ ತೋಟಗಾರಿಕೆ ಇಲಾಖೆ ಮನವಿ ಮಾಡಿದೆ. ಪ್ರೂಟ್ಸ್ ತಂತ್ರಾಂಶದಲ್ಲಿ ರೈತರ ವೈಯಕ್ತಿಕ ಮಾಹಿತಿ, ಜಮೀನಿನ, ಬೆಳೆಯ ವಿವರ ಹಾಗೂ ಈ ಹಿಂದೆ ಸರ್ಕಾರದಿಂದ ಪಡೆದ ಎಲ್ಲಾ ಇಲಾಖೆಗಳ ಸವಲತ್ತಿನ ವಿವರ ಒಳಗೊಂಡಿರುತ್ತದೆ. ಸರ್ಕಾರದ ವಿವಿಧ ಇಲಾಖೆಗಳಿಂದ ರೈತರಿಗೆ ವಿವಿಧ ಯೋಜನೆಗಳಡಿ ಸಹಾಯಧನ, ಸವಲತ್ತು ನೀಡಲು ರೈತರು ಕ್ರೋಢಿಕರಿಸಿದ ದತ್ತಾಂಶ, ರೈತರ ವೈಯಕ್ತಿಕ ಹಾಗೂ ಜಮೀನಿನ ವಿವರ ಇರುತ್ತದೆ. ಇಲಾಖಾವಾರು ವಿವಿಧ ಯೋಜನೆಯ ಸವಲತ್ತು ಪಡೆದ ರೈತರ ಮಾಹಿತಿ ದತ್ತಾಂಶದಲ್ಲಿ ಲಭ್ಯವಾಗುವುದು. ರೈತರು ಸರ್ಕಾರದ ಯಾವುದೇ ಇಲಾಖೆಯಲ್ಲಿ ಸವಲತ್ತು ಪಡೆಯಲು ಪ್ರತಿ ಸಲ ದಾಖಲಾತಿ ನೀಡುವ ಅವಶ್ಯಕತೆ ಇರುವುದಿಲ್ಲ. ಸರ್ಕಾರದ ಯೋಜನೆಯು ಉತ್ತಮ ರೀತಿಯಲ್ಲಿ ಅನುಷ್ಠಾನ ಮಾಡಲು ತಂತ್ರಾಂಶ ನೆರವಾಗುವುದು. (ಕಡಿಮೆ ಅವಧಿ, ಏಕಕಾಲದಲ್ಲಿ ವಿವಿಧ ಹಂತಗಳ ಪರಿಶೀಲನೆ, ಸ್ಥಳ ನಿರ್ದಿಷ್ಟತೆ, ಕಾಮಗಾರಿಯ ವಿವಿಧ ಹಂತದ ಛಾಯಾಚಿತ್ರ, ಜಿಯೋ ಟ್ಯಾಗ್), ಸರ್ಕಾರದ ಯೋಜನೆಗಳನ್ನು ಕಾಗದ ರಹಿತ ಮಾದರಿಯಲ್ಲಿ ಅನುಷ್ಠಾನಗೊಳಿಸುವುದರಿಂದ ಸರ್ಕಾರಕ್ಕೆ ಹೊರೆ ಕಡಿಮೆಯಾಗಲಿದೆ. ಫ್ರೂಟ್ಸ್ ತಂತ್ರಾಂಶದ ಜೋಡಣೆಯೊಂದಿಗೆ ಅನುಷ್ಠಾನ ಇಲಾಖೆಗಳಿಂದ ಯೋಜನೆಗಳನ್ನು ಅನುಷ್ಠಾನ ಮಾಡಲಾಗುತ್ತಿದೆ. ತೋಟಗಾರಿಕೆ ಇಲಾಖೆಯಿಂದ ಹಸಿರು ತಂತ್ರಾಂಶದ ಮೂಲಕ ಎಲ್ಲ ಯೋಜನೆ ಹಾಗೂ ಬೆಳೆ ವಿಮೆ ಅನುಷ್ಠಾನಗೊಳಿಸಲಾಗುತ್ತಿದೆ. ಕೃಷಿ ಇಲಾಖೆಯಿಂದ ಪಿ.ಎಂ ಕಿಸಾನ್ ಮತ್ತು ಬೆಳೆ ವಿಮೆ, ರೇಷ್ಮೆ ಇಲಾಖೆಯಿಂದ ಫ್ರೂಟ್ಸ್ ನೊಂದಾಯಿತ ರೈತರಿಗೆ ಸವಲತ್ತು ನೀಡಲಾಗುತ್ತಿದೆ. ಪಶು ಸಂಗೋಪನೆ ಇಲಾಖೆಯಿಂದ ಪಶುಭಾಗ್ಯ, ಕೆ.ಎಂ.ಎಫ್ ಪ್ರೋತ್ಸಾಹಧನ, ಸಹಕಾರ ಇಲಾಖೆಯಿಂದ ಬೆಂಬಲ ಬೆಲೆ ಯೋಜನೆ ಹಾಗೂ ಕಂದಾಯ ಇಲಾಖೆಯಿಂದ ಬೆಳೆ ನಾಶ, ಪ್ರಕೃತಿ ವಿಕೋಪ ಪರಿಹಾರ ಕಾರ್ಯಗಳನ್ನು ಫ್ರೂಟ್ಸ್ ತಂತ್ರಾಂಶದ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ. ಹೋಬಳಿ ಮಟ್ಟದಲ್ಲಿ ಎಲ್ಲಾ ರೈತ ಸಂಪರ್ಕ ಕೇಂದ್ರ, ತಾಲೂಕು ಮಟ್ಟದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಪಶುಪಾಲನೆ ಕಚೇರಿ, ಹೋಬಳಿ ಮಟ್ಟದಲ್ಲಿ ಕಂದಾಯ ಇಲಾಖೆಯ ನಾಡಕಚೇರಿ ಹಾಗೂ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ (ಸಿಎಸ್‌ಸಿ) ಪ್ರೂಟ್ಸ್ ತಂತ್ರಾಂಶದಡಿ ನೋಂದಣಿ ಮಾಡಬಹುದಾಗಿದೆ. ಈ ತಂತ್ರಾಂಶದಲ್ಲಿ ನೋಂದಣಿ ಮಾಡಿಸಲು ರೈತರು ಆಧಾರ್ ಸಂಖ್ಯೆ, ರಾಷ್ಟ್ರೀಕೃತ ಬ್ಯಾಂಕ್ ಪಾಸ್ ಪುಸ್ತಕನ ಜೆರಾಕ್ಸ್, ಮೊಬೈಲ್ ಸಂಖ್ಯೆ, ಪ್ರಸಕ್ತ ಸಾಲಿನ ಪಹಣಿ/ಆರ್.ಟಿ.ಸಿ ಅಗತ್ಯ ದಾಖಲೆಗಳನ್ನು ಸಲ್ಲಿಸಬೇಕು. ಸರ್ಕಾರದ ಯಾವುದೇ ಸವಲತ್ತು ಪಡೆಯಲು ಫ್ರೂಟ್ಸ್ ತಂತ್ರಾಂಶದ ನೋಂದಣಿಯು ಕಡ್ಡಾಯವಾಗಿದ್ದು, ಕೂಡಲೇ ಎಲ್ಲಾ ರೈತರು ತಮ್ಮ ಮಾಲೀಕತ್ವಕ್ಕೆ ಒಳಪಡುವ ಎಲ್ಲಾ ಸರ್ವೆ ನಂಬರ್ ಗಳನ್ನು (ಭೂ ಹಿಡುವಳಿಯನ್ನು) ಸಂಬಂಧಪಟ್ಟ ದಾಖಲಾತಿಯೊಂದಿಗೆ ಫ್ರೂಟ್ಸ್ ತಂತ್ರಾಂಶದಲ್ಲಿ ನೊಂದಾವಣೆ ಮಾಡಿ ಸರ್ಕಾರದ ಸವಲತ್ತು ಪಡೆಯುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ಕೋರಿದ್ದಾರೆ.