ಸಾರಾಂಶ
ಗ್ರಾಮಸ್ಥರೆಲ್ಲರೂ ಸಗಣಿಯಲ್ಲಿ ಹೊಡೆದಾಡುವುದು ಈ ಹಬ್ಬದ ವಿಶೇಷ
ಕನ್ನಡಪ್ರಭ ವಾರ್ತೆ ಚಾಮರಾಜನಗರಜಿಲ್ಲೆಯ ಗಡಿಯಂಚಿನಲ್ಲಿರುವ ತಮಿಳುನಾಡಿನ ಗುಮಟಾಪುರ ಗ್ರಾಮದಲ್ಲಿ ಸಂಭ್ರಮದಿಂದ ಗೊರೆ ಹಬ್ಬವನ್ನು ಬುಧವಾರ ಆಚರಿಸಲಾಯಿತು.
ಸಗಣಿ ರಾಶಿ ಹಾಕಿ ಅದರಲ್ಲಿ ಹೊರಳಾಡುವ ಗ್ರಾಮಸ್ಥರು ಸಗಣಿಯಲ್ಲೇ ಹೊಡೆದಾಡುವುದು ಈ ಹಬ್ಬದ ವಿಶೇಷ. ಬಲಿಪಾಡ್ಯಮಿಯ ಮಾರನೇ ದಿನ ಆಚರಿಸಲಾಗುವ ಈ ಹಬ್ಬ ಅಚ್ಚ ಕನ್ನಡಿಗರೇ ಇರುವ ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮಟಾಪುರದಲ್ಲಿ ನಡೆದಿದೆ.ಪ್ರತಿವರ್ಷ ಬಲಿಪಾಡ್ಯಮಿಯ ಮಾರನೆ ದಿನ ಗೊರೆ ಹಬ್ಬವನ್ನು ಆಚರಿಸಲಾಗುತ್ತದೆ. ಅದರಂತೆ ಈ ವರ್ಷವೂ ಸಹ ಸಂಪ್ರದಾಯದಂತೆ ಗೊರೆ ಹಬ್ಬ ನಡೆಯಿತು. ಸಗಣಿಯಲ್ಲಿಯೇ ಹೊಡೆದಾಡುವುದು ಈ ಹಬ್ಬದ ವಿಶೇಷ. ಹಬ್ಬದ ದಿನ ಬೆಳಗ್ಗೆ ಗ್ರಾಮದ ಎಲ್ಲರ ಮನೆಯ ಕೊಟ್ಟಿಗೆಗಳಿಂದ ಸಗಣಿಯನ್ನು ಎತ್ತಿನ ಗಾಡಿ ಹಾಗೂ ಟ್ರಾಕ್ಟರ್‌ಗಳ ಮೂಲಕ ತಂದು ಗ್ರಾಮದ ಬೀರೇಶ್ವರ ದೇವಸ್ಥಾನದ ಬಳಿ ರಾಶಿ ಹಾಕಲಾಗುತ್ತದೆ. ಇದಾದ ನಂತರ ಗ್ರಾಮದ ಹೊಳೆ ದಂಡೆಗೆ ಹೋಗಿ ಇಬ್ಬರು ವ್ಯಕ್ತಿಗಳಿಗೆ ಹುಲ್ಲಿನ ಮೀಸೆ ಗಡ್ಡವನ್ನು ಕಟ್ಟಿ, ಹಣೆಗೆ ನಾಮ ಬಳಿದು, ಅವರನ್ನು ಕತ್ತೆಯ ಮೇಲೆ ಕುಳ್ಳಿರಿಸಿ ಊರ ತುಂಬೆಲ್ಲಾ ಮೆರವಣಿಗೆ ಮಾಡಲಾಗುತ್ತದೆ. ಹೀಗೆ ಕತ್ತೆಯ ಮೇಲೆ ಕುಳ್ಳರಿಸಿ ಮೆರವಣಿಗೆ ಮಾಡುವವರನ್ನು ಕೊಂಡಕಾರರು ಎನ್ನಲಾಗುತ್ತದೆ. ಸುಳ್ಳು ಹೇಳುವ ವ್ಯಕ್ತಿ ಗ್ರಾಮದ ಜನರಲ್ಲಿ ದ್ವೇಷಾಸೂಯೆ ಮೂಡಿಸಿ ಅಶಾಂತಿಗೆ ಕಾರಣವಾಗಿದ್ದ ಎನ್ನಲಾದ ವ್ಯಕ್ತಿಗಳಿಗೆ ಯಾವ ರೀತಿ ಶಿಕ್ಷೆ ನೀಡಲಾಗುತ್ತಿತ್ತು ಎಂಬುದರ ಸಂಕೇತವಾಗಿ ಇಬ್ಬರಿಗೆ ಚಾಡಿಕೋರರ ವೇಷ ಧರಿಸಿ ಕತ್ತೆಯ ಮೇಲೆ ಮೆರವಣಿಗೆ ನಡೆಸಲಾಗುತ್ತದೆ. ಬಳಿಕ ಸಗಣಿ ರಾಶಿ ಬಳಿ ಗ್ರಾಮದ ಜನ ಜಮಾಯಿಸಿ ಸಗಣಿಯಲ್ಲಿ ಹೊರಳಾಡುತ್ತಾ ಸಗಣಿಯಲ್ಲಿಯೇ ಹೊಡೆದಾಡುತ್ತಾರೆ.
-----------15ಸಿಎಚ್‌ಎನ್14ಮತ್ತು15
ತಮಿಳುನಾಡಿನ ತಾಳವಾಡಿ ತಾಲೂಕಿನ ಗುಮಟಾಪುರದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಬಲಿಪಾಡ್ಯಮಿಯ ಮಾರನೆ ದಿನ ಗ್ರಾಮದ ಜನರ ಸಮ್ಮುಖ ಬುಧವಾರ ಗೊರೆ ಹಬ್ಬ ಆಚರಿಸಲಾಯಿತು.