ನಗರದಲ್ಲಿ ಆಟೋ ದರ 30 ರಿಂದ 36 ರು.ಗೆ ಏರಿಕೆ: ಆ.1ರಿಂದ ಅನ್ವಯ

| N/A | Published : Jul 15 2025, 01:00 AM IST / Updated: Jul 15 2025, 05:36 AM IST

auto/Representative image

ಸಾರಾಂಶ

ಬಸ್‌, ಮೆಟ್ರೋ ರೈಲು ಪ್ರಯಾಣ ದರದ ನಂತರ ಇದೀಗ ನಗರದಲ್ಲಿ ಸಂಚರಿಸುವ ಆಟೋ ಪ್ರಯಾಣ ದರ ಆಗಸ್ಟ್‌ 1ರಿಂದ ಅನ್ವಯವಾಗುವಂತೆ ಹೆಚ್ಚಳ ಮಾಡಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ನಗರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

 ಬೆಂಗಳೂರು :  ಬಸ್‌, ಮೆಟ್ರೋ ರೈಲು ಪ್ರಯಾಣ ದರದ ನಂತರ ಇದೀಗ ನಗರದಲ್ಲಿ ಸಂಚರಿಸುವ ಆಟೋ ಪ್ರಯಾಣ ದರ ಆಗಸ್ಟ್‌ 1ರಿಂದ ಅನ್ವಯವಾಗುವಂತೆ ಹೆಚ್ಚಳ ಮಾಡಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ನಗರ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮೊದಲ 2 ಕಿಮೀಗೆ (ಕನಿಷ್ಠ ದರ) 30 ರು. ಇದ್ದ ಪ್ರಯಾಣ ದರವನ್ನು 36 ರು.ಗೆ ಹೆಚ್ಚಿಸಲಾಗಿದೆ. ಉಳಿದಂತೆ ನಂತರದ ಪ್ರತಿ ಕಿಮೀ ದರವನ್ನು 15 ರು.ನಿಂದ 18ರು.ಗೆ ಏರಿಸಲಾಗಿದೆ. ಕಾಯುವಿಕೆ ದರವನ್ನು ಮೊದಲ 5 ನಿಮಿಷಕ್ಕೆ ಉಚಿತ ಮತ್ತು 5 ನಿಮಿಷದ ನಂತರದ ಪ್ರತಿ 15 ನಿಮಿಷದ ದರವನ್ನು 5 ರು.ನಿಂದ 10 ರು.ಗೆ ಹೆಚ್ಚಳ ಮಾಡಲಾಗಿದೆ. ಹಾಗೆಯೇ, ಪ್ರಯಾಣಿಕರು 20 ಕೆಜಿ ಲಗೇಜನ್ನು ಯಾವುದೇ ಶುಲ್ಕವಿಲ್ಲದೆ ಆಟೋದಲ್ಲಿ ತೆಗೆದುಕೊಂಡು ಹೋಗಬಹುದಾಗಿದ್ದು, 20ರಿಂದ 50 ಕೆಜಿ ಲಗೇಜಿಗೆ ಪ್ರತಿ 20 ಕೆಜಿ ಲಗೇಜಿಗೆ 10 ರು.ನಂತೆ ಪಾವತಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಪರಿಷ್ಕೃತ ದರದ ಮೂಲ ಪಟ್ಟಿಯನ್ನು ಪ್ರತಿ ಆಟೋಗಳು ಪ್ರದರ್ಶಿಸಬೇಕು. ಹಾಗೆಯೇ, ಅ. 10ರೊಳಗೆ (90 ದಿನ) ಮೀಟರ್‌ನ್ನು ಪರಿಷ್ಕೃತ ದರಕ್ಕೆ ನಿಗದಿ ಮಾಡಿಕೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

-ಕನಿಷ್ಠ ದರ ನಂತರದ ಪ್ರತಿ ಕಿಮೀ ದರ 15 ರು.ನಿಂದ 18ರು.ಗೆ ಏರಿಕೆ-ಕಾಯುವಿಕೆ ದರ 5 ನಿಮಿಷಕ್ಕೆ ಉಚಿತ, ನಂತರದ ಪ್ರತಿ 15 ನಿಮಿಷದ ದರ 5 ರಿಂದ 10 ರು.ಗೆ ಏರಿಕೆ-20 ಕೆಜಿ ಲಗೇಜಿಗೆ ಶುಲ್ಕವಿಲ್ಲ, 20ರಿಂದ 50 ಕೆಜಿ ಲಗೇಜಿಗೆ ಪ್ರತಿ 20 ಕೆಜಿ ಲಗೇಜಿಗೆ 10 ರು. ತೆರಬೇಕು-90 ದಿನ (ಅ.10)ದೊಳಗೆ ಮೀಟರ್‌ನ್ನು ಪರಿಷ್ಕೃತ ದರಕ್ಕೆ ಪರಿವರ್ತಿಸಿಕೊಳ್ಳಲು ಸೂಚನೆ

Read more Articles on