ಸಾರಾಂಶ
ಬೆಂಗಳೂರು : ಅನಧಿಕೃತವಾಗಿ ನಿರ್ಮಿಸಿರುವ ಕಟ್ಟಡಗಳನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸುವಂತೆ ಪೂರ್ವ ನಗರ ಪಾಲಿಕೆ ಹೆಚ್ಚುವರಿ ಆಯುಕ್ತ ಲೋಖಂಡೆ ಸ್ನೇಹಲ್ ಸುಧಾಕರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಅಧಿಕಾರಿಗಳೊಂದಿಗೆ ಸಮನ್ವಯ ಸಭೆ
ಸೋಮವಾರ ಎಂಜಿನಿಯರಿಂಗ್ ಅಧಿಕಾರಿಗಳೊಂದಿಗೆ ಸಮನ್ವಯ ಸಭೆ ನಡೆಸಿದ ಅವರು, ನಗರಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು. ಪ್ರತಿ ವಾರ ವಿಭಾಗಕ್ಕೆ ಒಂದರಂತೆ ಎಂಟು ವಿಭಾಗಗಳಿಂದ ಎಂಟು ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲು ನಿಯಮಾನುಸಾರ ಕ್ರಮ ತೆಗೆದುಕೊಳ್ಳಲು ಸೂಚಿಸಿದರು.
ಕಲರ್ ಕೋಡ್ ಬಳಸಿ ಡಿಜಿಟಲ್ ನಕ್ಷೆ
ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಂಡಿರುವ, ಪ್ರಗತಿಯಲ್ಲಿರುವ ಹಾಗೂ ಕೈಗೊಳ್ಳಬೇಕಾದ ಕಾಮಗಾರಿಗಳಾಗಿ ಮೂರು ವರ್ಗಗಳಲ್ಲಿ ವಿಂಗಡಿಸಿ ಕಲರ್ ಕೋಡ್ ಬಳಸಿ ಡಿಜಿಟಲ್ ನಕ್ಷೆ ಸಿದ್ಧಪಡಿಸಿಕೊಳ್ಳಬೇಕು. ರಸ್ತೆ ಗುಂಡಿ ಮುಚ್ಚುವುದಕ್ಕೆ ಸಂಬಂಧಿಸಿದಂತೆ ‘ಬಿಟಿಪಿ ಅಸ್ತ್ರಂ’ ‘ರಸ್ತೆ ಗುಂಡಿ ಗಮನ’ ಹಾಗೂ ‘ಸಹಾಯ’ ಆ್ಯಪ್‌ಗಳಲ್ಲಿ ದಾಖಲಾಗಿರುವ ರಸ್ತೆ ಗುಂಡಿ ಮುಚ್ಚುವ ಕಾರ್ಯದ ಪ್ರಗತಿ ಮಾಹಿತಿಯನ್ನು ನವೀಕರಿಸಿ, ಪೂರ್ಣಗೊಂಡ ಕಾರ್ಯಗಳ ವಿವರಗಳನ್ನು ಆನ್‌ಲೈನ್‌ನಲ್ಲಿ ಅಸ್ತ್ರಂ ಆ್ಯಪ್‌ನಲ್ಲಿ ಅಪ್ಲೋಡ್ ಮಾಡುವಂತೆ ಅಧಿಕಾರಿಗಳಿಗೆ ಸ್ನೇಹಲ್ ಸುಧಾಕರ್ ಸೂಚಿಸಿದರು.
;Resize=(690,390))
)
;Resize=(128,128))
;Resize=(128,128))
;Resize=(128,128))