ಸಾರಾಂಶ
ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿರುವ ನಕಲಿ ಪತ್ರಕರ್ತ ದಿನೇಶ ಎಂಬ ವ್ಯಕ್ತಿ ವಿರುದ್ಧ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಲಿತ ಮುಖಂಡ ಹಾಗೂ ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ತಾಲೂಕಾಧ್ಯಕ್ಷ ಚಿಕ್ಕರಂಗಯ್ಯ ತಿಳಿಸಿದರು.
ಕೊರಟಗೆರೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ದಲಿತ ಮುಖಂಡರು
ಕನ್ನಡಪ್ರಭ ವಾರ್ತೆ ಕೊರಟಗೆರೆತಾಲೂಕಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದವರನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿರುವ ನಕಲಿ ಪತ್ರಕರ್ತ ದಿನೇಶ ಎಂಬ ವ್ಯಕ್ತಿ ವಿರುದ್ಧ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದಲಿತ ಮುಖಂಡ ಹಾಗೂ ಸರ್ಕಾರಿ ನ್ಯಾಯಬೆಲೆ ಅಂಗಡಿ ಮಾಲೀಕರ ಸಂಘದ ತಾಲೂಕಾಧ್ಯಕ್ಷ ಚಿಕ್ಕರಂಗಯ್ಯ ತಿಳಿಸಿದರು.
ಕೊರಟಗೆರೆ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಲದಮರ ಎಂಬ ವೆಬ್ ಸೈಟ್ ನ ಪತ್ರಕರ್ತ ಎಂದು ಹೇಳಿಕೊಂಡು ತಾಲೂಕಿನ ನ್ಯಾಯಬೆಲೆ ಅಂಗಡಿಗಳಿಗೆ ನುಗ್ಗಿ ದಾಂದಲೆ ನಡೆಸಿ ಅವರಿಂದ ಲಂಚದ ಒತ್ತಡ ಹಾಕಿ ಬೆದರಿಸುತ್ತಿರುವ ನಕಲಿ ಪತ್ರಕರ್ತ ದಿನೇಶನ ಹಾವಳಿ ಹೆಚ್ಚಾಗಿದೆ. ಆದರೆ, ಇವನು ಹೆಚ್ಚು ಪರಿಶಿಷ್ಟ ಜಾತಿ ಮತ್ತು ಪಂಗಡದ ಮಾಲೀಕತ್ವದ ನ್ಯಾಯಬೆಲೆ ಅಂಗಡಿಗಳಿಗೆ ನುಗ್ಗಿ ಕಿರುಕುಳ ನೀಡುತ್ತಿರುವುದು ಈ ಜನಾಂಗದ ಮೇಲಿರುವ ಇವನ ದ್ವೇಷ ಎದ್ದು ಕಾಣುತ್ತಿದೆ ಎಂದರು.ದಿನೇಶ್ ಎಂಬುವನು ತಾಲೂಕಿನಲ್ಲಿ ಬಹುತೇಕ ಪರಿಶಿಷ್ಟ ಜಾತಿ ಮತ್ತು ಪಂಗಡದವರನ್ನು ಗುರಿಯಾಗಿಸಿಕೊಂಡು ಕಿರುಕುಳ ನೀಡುತ್ತಿದ್ದಾನೆ. ಅವನ ಮೇಲೆ ಪೊಲೀಸರು ಕ್ರಮ ಜರುಗಿಸಲೇಬೇಕು. ಇಲ್ಲದಿದ್ದಲ್ಲಿ ಪ. ಜಾತಿ, ಪಂಗಡದ ಎಲ್ಲಾ ಮುಖಂಡರು ಮುಂದಿನ ದಿನಗಳಲ್ಲಿ ಬೀದಿಗಿಳಿದು ಹೋರಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ದಲಿತ ಸಂಘಟನೆ ಮುನಿಕುಮಾರ್, ಮಂಜುನಾಥ್, ಹಾಗೂ ನ್ಯಾಯಬೆಲೆ ಅಂಗಡಿ ಮಾಲೀಕರಾದ ನಯಾಜ್, ಸಿದ್ದಲಿಂಗಪ್ಪ, ಡಿ.ಎನ್.ರಮೇಶ್, ಕೆ.ಎಲ್.ಆನಂದ್, ಕೆ.ಎಸ್.ನಾಗೇಶ್ ಕುಮಾರ್ ಇತರರು ಪತ್ರಿಕಾಗೋಷ್ಠಿಯಲ್ಲಿದ್ದರು.-----
ಫೋಟೋ01: ಕೊರಟಗೆರೆಯಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿ ದಲಿತ ಮುಖಂಡ ಚಿಕ್ಕರಂಗಯ್ಯ ಹಾಗೂ ಇತರೆ ಮುಖಂಡರು ಇದ್ದರು.