ಸಾರಾಂಶ
ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಖಾತಾ ವಿತರಿಸಲು ಬಿಬಿಎಂಪಿ ವ್ಯವಸ್ಥೆ ಮಾಡಿದೆ. ಈವರೆಗೆ ಬಿಬಿಎಂಪಿ ಕಂದಾಯಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ಇ-ಖಾತಾ ವಿತರಿಸುವ ವ್ಯವಸ್ಥೆ ಮಾಡಲಾಗಿತ್ತು. ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರದಲ್ಲೂ ಇ-ಖಾತಾ ವಿತರಿಸುವ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರು : ನಗರ ಆಸ್ತಿ ಮಾಲೀಕರಿಗೆ ಅನುಕೂಲವಾಗುವ ಸಲುವಾಗಿ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಖಾತಾ ವಿತರಿಸಲು ಬಿಬಿಎಂಪಿ ವ್ಯವಸ್ಥೆ ಮಾಡಿದೆ.ಈವರೆಗೆ ಬಿಬಿಎಂಪಿ ಕಂದಾಯಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ಇ-ಖಾತಾ ವಿತರಿಸುವ ವ್ಯವಸ್ಥೆ ಮಾಡಲಾಗಿತ್ತು. ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರದಲ್ಲೂ ಇ-ಖಾತಾ ವಿತರಿಸುವ ವ್ಯವಸ್ಥೆ ಮಾಡಲಾಗಿದೆ. ಅದರಂತೆ ಆಸ್ತಿ ಮಾಲೀಕರು ಅಗತ್ಯ ದಾಖಲೆಗಳೊಂದಿಗೆ ಬೆಂಗಳೂರು ಒನ್ ಕೇಂದ್ರಕ್ಕೆ ಭೇಟಿ ನೀಡಿ 45 ರು. ಶುಲ್ಕ ಪಾವತಿಸಿ ಇ-ಖಾತಾ ಪಡೆಯಬಹುದಾಗಿದೆ.
ಇ-ಖಾತಾ ಪಡೆಯಲು ಎದುರಾಗುವ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲು ಹಾಗೂ ಇ-ಖಾತಾಕ್ಕೆ ಸಂಬಂಧಿಸಿದಂತೆ ಇರುವ ಗೊಂದಲ ನಿವಾರಿಸಲು ಬಿಬಿಎಂಪಿಯಿಂದ 13 ಸಹಾಯವಾಣಿ ತಂಡ ರಚಿಸಲಾಗಿದೆ. ಆಸ್ತಿ ಮಾಲೀಕರು ಸದರಿ ಕೇಂದ್ರಗಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಸಮಸ್ಯೆ ಬಗೆಹರಿಸಿಕೊಳ್ಳಬಹುದಾಗಿದೆ ಎಂದು ಬಿಬಿಎಂಪಿ ತಿಳಿಸಿದೆ.
ವಲಯಸಹಾಯವಾಣಿ ಸಂಖ್ಯೆ
ಬೊಮ್ಮನಹಳ್ಳಿ9480683182 / 9480683712ದಾಸರಹಳ್ಳಿ 9480683710ಮಹಾದೇವಪುರ9480683718 / 9480683720ಪೂರ್ವ9480683203ಪಶ್ಚಿಮ9480683653 / 9480683204ದಕ್ಷಿಣ9480683638 / 9480683179ರಾಜರಾಜೇಶ್ವರಿ ನಗರ9480683576 ಯಲಹಂಕ9480683645 / 9480683516