ನಾಳೆಯಿಂದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ
KannadaprabhaNewsNetwork | Published : Oct 25 2023, 01:15 AM IST
ನಾಳೆಯಿಂದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ
ಸಾರಾಂಶ
ಚಾಮರಾಜನಗರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ 14 ರಿಂದ 17 ವರ್ಷ ವಯೋಮಿತಿಯ ಬಾಲಕ, ಬಾಲಕಿಯರ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಮತ್ತು ಪ್ರೌಢಶಾಲಾ ಮಕ್ಕಳ ಅಥ್ಲೆಟಿಕ್ಸ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಅ. 26ರಂದು ಬೆಳಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.
ಚಾಮರಾಜನಗರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ 14 ರಿಂದ 17 ವರ್ಷ ವಯೋಮಿತಿಯ ಬಾಲಕ, ಬಾಲಕಿಯರ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಮತ್ತು ಪ್ರೌಢಶಾಲಾ ಮಕ್ಕಳ ಅಥ್ಲೆಟಿಕ್ಸ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಅ. 26ರಂದು ಬೆಳಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ. ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಸಮಾರಂಭ ಉದ್ಘಾಟಿಸಲಿದ್ದಾರೆ. ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಲೋಕಸಭಾ ಸದಸ್ಯ ವಿ. ಶ್ರೀನಿವಾಸ ಪ್ರಸಾದ್ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಕ್ರೀಡಾಜ್ಯೋತಿ ಸ್ವೀಕರಿಸಲಿದ್ದಾರೆ. ಶಾಸಕ ಹೆಚ್.ಎಂ. ಗಣೇಶ್‌ಪ್ರಸಾದ್ ಅವರು ತಂಡದ ಪರಿಚಯಸಲಿದ್ದಾರೆ. ಶಾಸಕ ಎಂ.ಆರ್. ಮಂಜುನಾಥ್ ಅವರು ಕ್ರೀಡಾ ವಂದನೆ ಸ್ವೀಕಾರ ಮಾಡಿಕೊಡಲಿದ್ದಾರೆ. ಶಾಸಕರಾದ ಮರಿತಿಬ್ಬೇಗೌಡ, ಡಾ. ಡಿ. ತಿಮ್ಮಯ್ಯ, ಸಿ.ಎನ್. ಮಂಜೇಗೌಡ, ಮಧು. ಜಿ. ಮಾದೇಗೌಡ, ನಗರಸಭಾ ಸದಸ್ಯರಾದ ಸಿ.ಜಿ. ಚಂದ್ರಶೇಖರ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ. -------------