ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ

| Published : Oct 23 2023, 12:15 AM IST

ಅಂಬೇಡ್ಕರ್ ದೀಕ್ಷಾ ಭೂಮಿ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ
Share this Article
  • FB
  • TW
  • Linkdin
  • Email

ಸಾರಾಂಶ

ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೈಗೊಂಡಿರುವ ೨೦೨೩-೨೪ನೇ ಸಾಲಿನ ಮಹಾರಾಷ್ಟ್ರದ ನಾಗಪುರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್‌ರವರ ದೀಕ್ಷಾಭೂಮಿ ಯಾತ್ರೆಗೆ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾಲಾರ್ಪಣೆ ಮಾಡಿ ಬೀಳ್ಕೊಟ್ಟು ಶುಭ ಕೋರಿದರು.
ಜಿಲ್ಲಾಡಳಿತ ಭವನದ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾಲಾರ್ಪಣೆ ಕನ್ನಡಪ್ರಭ ವಾರ್ತೆ ಚಾಮರಾಜನಗರ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಕೈಗೊಂಡಿರುವ ೨೦೨೩-೨೪ನೇ ಸಾಲಿನ ಮಹಾರಾಷ್ಟ್ರದ ನಾಗಪುರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್‌ರವರ ದೀಕ್ಷಾಭೂಮಿ ಯಾತ್ರೆಗೆ ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾಲಾರ್ಪಣೆ ಮಾಡಿ ಬೀಳ್ಕೊಟ್ಟು ಶುಭ ಕೋರಿದರು. ಬಳಿಕ ಮಾತನಾಡಿದ ಶಾಸಕರು, ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರತಿ ವರ್ಷದಂತೆ ಈ ಬಾರಿಯು ಡಾ.ಬಿ.ಆರ್.ಅಂಬೇಡ್ಕರ್ ಅವರು ದೀಕ್ಷಾ ಪಡೆದಂತಹ ಮಹಾರಾಷ್ಟ್ರದ ನಾಗಪುರದ ದೀಕ್ಷಾಭೂಮಿ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಕೆಎಸ್‌ಆರ್‌ಟಿಸಿ, ಐರಾವತ್ ಬಸ್ ನಲ್ಲಿ ತೆರಳುತ್ತಿರುವ ಎಲ್ಲಾ ಯಾತ್ರಿಗಳಿಗೆ ಶುಭವಾಗಲಿ. ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಚಿಂತನೆಗಳನ್ನು ಅಳವಡಿಸಿಕೊಂಡು ಅವರ ಹಾದಿಯಲ್ಲಿ ಸಾಗಲಿ ಎಂದರು. ಇದಕ್ಕೂ ಮೊದಲು ಯಾತ್ರಿಗಳು ಅಂಬೇಡ್ಕರ್ ಪುತ್ಥಳಿ ಬಳಿ ಸಾಮೂಹಿಕ ವಂದನೆ ಸಲ್ಲಿಸಿ ಜಿಲ್ಲಾಡಳಿತ ಭವನದಿಂದ ಭುವನೇಶ್ವರಿ ವೃತ್ತದ ಮೂಲಕ ವಾಪಸ್ ಜಿಲ್ಲಾಡಳಿತ ಭವನದೆಡೆಗೆ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ , ಸಹಾಯಕ ನಿದೇಶಕ ಚಿಕ್ಕಬಸವಯ್ಯ, ನಗರಸಭಾ ಸದಸ್ಯರಾದ ರಾಜಪ್ಪ, ಎಂ.ಮಹೇಶ್, ದಲಿತ ಸಂಘರ್ಷ ಸಮಿತಿ ಡಿ.ಜಿ. ಸಾಗರ್ ಬಣದ, ಜಿಲ್ಲಾ ಸಂಚಾಲಕ ಸಿ.ಎಂ.ಶಿವಣ್ಣ, ಜಿಲ್ಲಾ ಸಂಚಾಲಕ ಕೆ.ಎಂ.ನಾಗರಾಜು, ಸಿ.ಎಂ.ಕೃಷ್ಣಮೂರ್ತಿ, ಚಿಕ್ಕಮಹದೇವು, ಕಾಗಲವಾಡಿಚಂದ್ರು ಇತರರು ಹಾಜರಿದ್ದರು. ---- ಬಾಕ್ಸ್.... ಸಚಿವ ಸ್ಥಾನ ನೀಡಲು ಸಿಎಂ ಭರವಸೆ ನೀಡಿದ್ದಾರೆ: ಶಾಸಕ ಸಿ.ಪುಟ್ಟರಂಗಶೆಟ್ಟಿ ಚಾಮರಾಜನಗರ:ಜೂನ್ ಒಳಗೆ ನನಗೆ ಮಂತ್ರಿಸ್ಥಾನ ಕೊಡ್ತೀನಿ ಅಂತ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆಂದು ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜೂನ್ ‌ನಲ್ಲಿ ನಿನಗೆ ಮಂತ್ರಿ ಸ್ಥಾನ ಕೊಡ್ತೀನಯ್ಯ’ ಅಂತ ಸಿಎಂ ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದ್ದಾರೆ. ನನಗೆ ಮಂತ್ರಿ ಸ್ಥಾನ ಕೊಡೋದು ಬಿಡೋದು ಮುಖ್ಯಮಂತ್ರಿ ಹಾಗು ಉಪಮುಖ್ಯಮಂತ್ರಿಗೆ ಬಿಟ್ಟ ವಿಚಾರವಾಗಿದೆ. ನನಗೆ ಉಪಸಭಾಪತಿ ಸ್ಥಾನ ಕೊಟ್ಟಿದ್ರು, ಅದರೆ ನಾನೇ ಒಪ್ಪಲಿಲ್ಲ. ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಹೈಕಮಾಂಡ್‌ಗೆ ಗೊತ್ತಿದೆ. ಸಿದ್ದರಾಮಯ್ಯ, ಡಿಕೆಶಿ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಒಗ್ಗಟ್ಟಾಗಿಯೇ ಹೋಗುತ್ತಿದ್ದಾರೆ.ಭಿನ್ನಾಭಿಪ್ರಾಯ ಎಂಬುದು ವಿರೋಧ ಪಕ್ಷಗಳ ಆರೋಪವಷ್ಟೇ ಎಂದು ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ತಿಳಿಸಿದರು. ---- 22ಸಿಎಚ್ಎನ್‌14 ಚಾಮರಾಜನಗರದಿಂದ ನಾಗಪುರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್‌ರವರ ದೀಕ್ಷಾಭೂಮಿಗೆ ಹೊರಟಿರುವ ಯಾತ್ರಿಗಳಿಗೆ ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಶುಭ ಕೋರಿದರು.