ಸಾರಾಂಶ
ಬೆಂಗಳೂರಿನ ಯಲಹಂಕದ ವಾಯುಪಡೆ ನೆಲೆಯಲ್ಲಿ ಸೋಮವಾರದಿಂದ ಐದು ದಿನಗಳ ಏರೋ ಇಂಡಿಯಾ ಶೋ ನಡೆಯಲಿದೆ. ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನಕ್ಕೆ ರಕ್ಷಣಾ ಸಚಿವ ರಾಜ್‌ನಾಥ್‌ಸಿಂಗ್ ಅವರು ಚಾಲನೆ ನೀಡಲಿದ್ದಾರೆ. ಹಲವಾರು ಯುದ್ಧವಿಮಾನಗಳು ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಸಿದ್ಧವಾಗಿವೆ.
ಬೆಂಗಳೂರು : ಬೆಂಗಳೂರಿನ ಯಲಹಂಕದ ವಾಯುಪಡೆ ನೆಲೆಯಲ್ಲಿ ಸೋಮವಾರದಿಂದ ಐದು ದಿನಗಳ ಏರೋ ಇಂಡಿಯಾ ಶೋ ನಡೆಯಲಿದೆ. ಏಷ್ಯಾದ ಅತಿ ದೊಡ್ಡ ವೈಮಾನಿಕ ಪ್ರದರ್ಶನಕ್ಕೆ ರಕ್ಷಣಾ ಸಚಿವ ರಾಜ್‌ನಾಥ್‌ಸಿಂಗ್ ಅವರು ಚಾಲನೆ ನೀಡಲಿದ್ದಾರೆ. ಹಲವಾರು ಯುದ್ಧವಿಮಾನಗಳು ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಸಿದ್ಧವಾಗಿವೆ. ಈ ವೈಮಾನಿಕ ಪ್ರದರ್ಶನದ ವೈಶಿಷ್ಟ್ಯ ಇಲ್ಲಿದೆ.
90- ಏರೋ ಇಂಡಿಯಾದಲ್ಲಿ ಪಾಲ್ಗೊಳ್ಳುತ್ತಿರುವ ದೇಶಗಳ ಸಂಖ್ಯೆ.
70 - ಏರ್‌ಶೋದಲ್ಲಿ ಪ್ರದರ್ಶನ ನೀಡಲಿರುವ ಯುದ್ಧ ವಿಮಾನ, ಸರಕು, ತರಬೇತಿ ವಿಮಾನಗಳು
30- ಏರ್ ಶೋದಲ್ಲಿ ಪ್ರದರ್ಶನಕ್ಕೆ ಇಡಲಾಗಿರುವ ವಿಮಾನಗಳು, ಹೆಲಿಕಾಪ್ಟರ್‌ಗಳು
750 - ಏರ್‌ಶೋದಲ್ಲಿ ಭಾಗಿಯಾಗಲಿರುವ ಭಾರತದ ಕಂಪನಿಗಳು
100 - ಏರ್‌ಶೋದಲ್ಲಿ 100ಕ್ಕೂ ಹೆಚ್ಚು ರಾಷ್ಟ್ರಗಳ ಪ್ರತಿನಿಧಿಗಳು ಭಾಗಿ
7 ಲಕ್ಷ - ಏರ್‌ಶೋಗೆ 5 ದಿನಗಳಲ್ಲಿ 7 ಲಕ್ಷ ಜನರು ಆಗಮಿಸುವ ನಿರೀಕ್ಷೆ
30- ಏರ್‌ಶೋದಲ್ಲಿ ಪಾಲ್ಗೊಳ್ಳಲಿರುವ ವಿವಿಧ ರಾಷ್ಟ್ರಗಳ ರಕ್ಷಣಾಮಂತ್ರಿಗಳು
42000 ಚ.ಮೀ.: ವಿಮಾನಗಳು, ರಕ್ಷಣಾ ಉತ್ಪನ್ನಗಳ ಪ್ರದರ್ಶನಕ್ಕೆ ಮೀಸಲಿಟ್ಟ ಜಾಗ