ಸಾರಾಂಶ
ಬೆಂಗಳೂರು : ಹೂಡಿಕೆದಾರರ ಸಮಾವೇಶದಲ್ಲಿ ಹೂಡಿಕೆದಾರರು ರಾಜ್ಯ ಪ್ರವಾಸೋದ್ಯಮ ವಲಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿರುವುದು ಉತ್ತಮ ಬೆಳವಣಿಗೆ ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ.
ಕೆಎಸ್‌ಟಿಡಿಸಿ ಸಭಾಂಗಣದಲ್ಲಿ ನಡೆದ ರಾಜ್ಯದ ಹಾಗೂ ದೇಶದ ವಿವಿಧ ಭಾಗಗಳ ಹೂಡಿಕೆದಾರರು, ಎಫ್‌ಕೆಸಿಸಿಐ ಅಧ್ಯಕ್ಷರು, ಉಪಾಧ್ಯಕ್ಷರು, ಅಧಿಕಾರಿಗಳೊಂದಿಗೆ ಸಚಿವರು ದುಂಡುಮೇಜಿನ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕರ್ನಾಟಕ ಬಂಡವಾಳ ಹೂಡಿಕೆ ಸ್ನೇಹಿ ರಾಜ್ಯವಾಗಿದೆ. ಶ್ರೀಮಂತರ ಪರಿಸರ ಹೊಂದಿರುವ ನಮ್ಮ ರಾಜ್ಯದಲ್ಲಿ ಪ್ರವಾಸೋಮ್ಯ ಅಭಿವೃದ್ಧಿಗಾಗಿ ಹೊಸದೊಂದು ನೀತಿ ರೂಪಿಸಿಲಾಗಿದೆ. ಈಗಾಗಲೇ ನೂತನ ನೀತಿಯಡಿ ₹793 ಕೋಟಿ ಮೊತ್ತದ 27 ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಬಂಡವಾಳ ಹೂಡಿಕೆ ಸಮಾವೇಶದಲ್ಲಿ ಹೂಡಿಕೆದಾರರು ರಾಜ್ಯ ಪ್ರವಾಸೋದ್ಯಮ ವಲಯದದಲ್ಲಿ ಹೆಚ್ಚಿನ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಇದು ಪ್ರವಾಸೋದ್ಯಮ ವಲಯದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಕೆಎಸ್‌ಟಿಡಿಸಿ ಅಧ್ಯಕ್ಷ ಶ್ರೀನಿವಾಸ್ ಹಾಗೂ ಪ್ರವಾಸೋದ್ಯಮ ಇಲಾಖೆ ಕಾರ್ಯದರ್ಶಿ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.