ಡಾ। ಶಿವಕುಮಾರ ಸ್ವಾಮೀಜಿ ಪೀಣ್ಯ ಮೇಲ್ಸೇತುವೆ ಮೇಲೆ ಪ್ರತಿ ಬುಧವಾರ ಭಾರೀ ವಾಹನ ಬಂದ್‌

| N/A | Published : Feb 21 2025, 01:45 AM IST / Updated: Feb 21 2025, 05:04 AM IST

ಸಾರಾಂಶ

ಡಾ। ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ(ಪೀಣ್ಯ ಫ್ಲೈ ಓವರ್‌) ಗ್ರೌಟಿಂಗ್‌ ಕಾಮಗಾರಿ ಹಿನ್ನೆಲೆಯಲ್ಲಿ ಪ್ರತಿ ಬುಧವಾರ ಬೆಳಗ್ಗೆ 6ರಿಂದ ಗುರುವಾರ ಬೆಳಗ್ಗೆ 6ರವರೆಗೆ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

 ಬೆಂಗಳೂರು :  ಡಾ। ಶಿವಕುಮಾರ ಸ್ವಾಮೀಜಿ ಮೇಲ್ಸೇತುವೆ(ಪೀಣ್ಯ ಫ್ಲೈ ಓವರ್‌) ಗ್ರೌಟಿಂಗ್‌ ಕಾಮಗಾರಿ ಹಿನ್ನೆಲೆಯಲ್ಲಿ ಪ್ರತಿ ಬುಧವಾರ ಬೆಳಗ್ಗೆ 6ರಿಂದ ಗುರುವಾರ ಬೆಳಗ್ಗೆ 6ರವರೆಗೆ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ನಗರ ಸಂಚಾರ ಪೊಲೀಸರು ತಿಳಿಸಿದ್ದಾರೆ.

ಈ ಹಿಂದೆ ಮೇಲ್ಸೇತುವೆ ಗ್ರೌಟಿಂಗ್‌ ಕಾಮಗಾರಿ ಹಿನ್ನೆಲೆಯಲ್ಲಿ ಪ್ರತಿ ಶುಕ್ರವಾರ ಬೆಳಗ್ಗೆ 6ರಿಂದ ಶನಿವಾರ ಬೆಳಗ್ಗೆ 6ರವರೆಗೆ ಭಾರೀ ವಾಹನಗಳ ಸಂಚಾರ ನಿರ್ಬಂಧಿಸಿ ಆದೇಶಿಸಲಾಗಿತ್ತು. ಆದರೆ, ವಾರಾಂತ್ಯದಲ್ಲಿ ಬೆಂಗಳೂರಿನಿಂದ ಹೊರ ಹೋಗುವ ವಾಹನಗಳ ಸಂಚಾರ ಅಧಿಕವಾಗುವ ಕಾರಣ ತುಮಕೂರು ರಸ್ತೆಯಲ್ಲಿ ಹೆಚ್ಚಿನ ವಾಹನ ಸಂಚಾರ ದಟ್ಟಣೆಯಾಗುತ್ತಿತ್ತು. ಇದನ್ನು ನಿವಾರಿಸುವ ನಿಟ್ಟಿನಲ್ಲಿ ಫೆ.26ರಿಂದ ಜಾರಿಗೆ ಬರುವಂತೆ ಗ್ರೌಟಿಂಗ್‌ ಕಾಮಗಾರಿಯನ್ನು ಮರುನಿಗದಿಪಡಿಸಿರುವುದರಿಂದ ಇನ್ನು ಮುಂದೆ ಪ್ರತಿ ಬುಧವಾರ ಬೆಳಗ್ಗೆ 6ರಿಂದ ಗುರುವಾರ ಬೆಳಗ್ಗೆ 6ರವರೆಗೆ ಮೇಲ್ಸೇತುವೆಯಲ್ಲಿ ಭಾರೀ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಪರ್ಯಾಯ ಮಾರ್ಗಗಳು:

ಬೆಂಗಳೂರಿನಿಂದ ಪೀಣ್ಯ ಮೇಲ್ಸೇತುವೆಯಲ್ಲಿ ಸಂಚರಿಸುವ ಭಾರೀ ವಾಹನಗಳು ಸಿಎಂಟಿಐ ಜಂಕ್ಷನ್‌ನಿಂದ ಮೇಲ್ಸೇತುವೆ ಕೆಳಗಿನ ತುಮಕೂರು ರಸ್ತೆಯಲ್ಲಿ ಸಂಚರಿಸಬೇಕು. ತುಮಕೂರು ರಸ್ತೆಯಿಂದ ಪೀಣ್ಯ ಮೇಲ್ಸೇತುವೆಯಲ್ಲಿ ಸಂಚರಿಸುವ ಭಾರೀ ವಾಹನಗಳು ಕೆನ್ನಮೆಟಲ್‌ ಸರ್ವಿಸ್‌ ರಸ್ತೆಯ ಮುಖಾಂತರ ಗೊರಗುಂಟೆಪಾಳ್ಯ ಕಡೆಗೆ ಸಂಚರಿಸಬೇಕು.