ಸಾರಾಂಶ
ದುಶ್ಚಟ ಮುಕ್ತ ಸಮಾಜ ನಿರ್ಮಿಸಲು ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಸುನಿತಾಪ್ರಭು ಅಭಿಪ್ರಾಯಪಟ್ಟರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಹೆಬ್ಬೂರು ವಲಯದ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸುನಿತಾಪ್ರಭು ಕರೆ । ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ತುಮಕೂರುದುಶ್ಚಟ ಮುಕ್ತ ಸಮಾಜ ನಿರ್ಮಿಸಲು ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿದೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ತಾಲೂಕು ಯೋಜನಾಧಿಕಾರಿ ಸುನಿತಾಪ್ರಭು ಅಭಿಪ್ರಾಯಪಟ್ಟರು.ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ವತಿಯಿಂದ ಹೆಬ್ಬೂರು ವಲಯದ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮದಲ್ಲಿ ಮಾತನಾಡಿದರು.ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಸಿ.ಸಿ.ಪಾವಟೆರವರು ವಿದ್ಯಾರ್ಥಿಗಳು ಮೊಬೈಲ್ ಬಳಕೆ ಕಡಿಮೆ ಮಾಡಬೇಕು, ತಂದೆ ತಾಯಿ ದುಡಿದ ಹಣವನ್ನು ವ್ಯರ್ಥ ಮಾಡಬಾರದು. ಚಿಕ್ಕ ವಯಸ್ಸಿನಲ್ಲಿ ವಿದ್ಯೆ ಸಂಪಾದಿಸಿ ಸಮಾಜದಲ್ಲಿ ಯಶಸ್ವಿ ವ್ಯಕ್ತಿಗಳಾಗಿ ಸಮಾಜ ರೂಪಿಸುವ ಹೊಣೆ ತಮ್ಮ ಮೇಲಿದೆ ಎಂದು ತಿಳಿಸಿದರು.
ಹೆಬ್ಬೂರು ಪೊಲೀಸ್ ಉಪನಿರೀಕ್ಷಕ ಬೈರೇಗೌಡರವರು ಎಲ್ಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ಬೈಕ್ ನಲ್ಲಿ ಪ್ರಯಾಣ ಮಾಡುವಾಗ ಹೆಲ್ಮೆಟ್ ನ್ನು ಖಡ್ಡಾಯವಾಗಿ ಧರಿಸುವ ಬಗ್ಗೆ ಮಾಹಿತಿ ನೀಡಿದರು. ಹಾಗೂ ನಿಮ್ಮ ನಿಮ್ಮ ಹಳ್ಳಿಯ ಭಾಗದಲ್ಲಿ ಕುಡಿತಕ್ಕೆ ಒಳಗಾಗಿರುವವರು ಇದ್ದಾರೆ ಅವರಿಗೆ ಮನವರಿಕೆ ಮಾಡಿ ಸಮಾಜದಲ್ಲಿ ಅವರನ್ನು ಮುಕ್ತ ವಾಹಿನಿಗೆ ತರುವಲ್ಲಿ ವಿದ್ಯಾರ್ಥಿಗಳ ಪಾತ್ರ ಮುಖ್ಯವಾದದ್ದು, ಮದ್ಯಪಾನ ಇಡೀ ಸಮಾಜಕ್ಕೆ ಮಾರಕ, ಮದ್ಯಪಾನ ಮುಕ್ತ ಸಮಾಜಕ್ಕೆ ಕರೆ ನೀಡಿದರು.ವಲಯದ ಮೇಲ್ವಿಚಾರಕ ಅರುಣ್ ಕುಮಾರ್, ಹೆಬ್ಬೂರು ವಲಯದ ಸೇವಾ ಪ್ರತಿನಿಧಿ ಚೆನ್ನಿಗರಾಯಪ್ಪ, ಪ್ರಥಮ ದರ್ಜೆ ಕಾಲೇಜಿನ ಡಿ.ಕೆ.ಕೃಷ್ಣಮೂರ್ತಿ, ಸಹ ಶಿಕ್ಷಕರು ಮತ್ತು ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.