ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ತನಿಖೆಯಾಗಲಿ: ಡಾ.ಎಚ್ಸಿಎಂ

| Published : Dec 14 2023, 01:30 AM IST

ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ತನಿಖೆಯಾಗಲಿ: ಡಾ.ಎಚ್ಸಿಎಂ
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆ ಹತ್ತಿರವಾದರೆ ಒಂದಿಲ್ಲೊಂದು ರೀತಿಯ ಭದ್ರತಾ ವೈಫಲ್ಯವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಆರೋಪಿಸಿದ್ದಾರೆ.

ಫೋಟೋ- 13ಎಂವೈಎಸ್ 29

ಕನ್ನಡಪ್ರಭ ವಾರ್ತೆ ಮೈಸೂರು

ಲೋಕಸಭಾ ಚುನಾವಣೆ ಹತ್ತಿರವಾದರೆ ಒಂದಿಲ್ಲೊಂದು ರೀತಿಯ ಭದ್ರತಾ ವೈಫಲ್ಯವಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಆರೋಪಿಸಿದ್ದಾರೆ.

2001ರಲ್ಲಿ ಎಲ್.ಕೆ. ಅಡ್ವಾಣಿ ಅವರು ಗೃಹ ಸಚಿವರಾಗಿದ್ದಾಗ ಸಂಸತ್ ಮೇಲೆ ದಾಳಿ ನಡೆದಿತ್ತು. ಕಳೆದ ಬಾರಿಯ ಚುನಾವಣೆ ಸಂದರ್ಭದಲ್ಲಿ ಭದ್ರತಾ ವೈಫಲ್ಯದ ಪರಿಣಾಮ ಪುಲ್ವಾಮ ಗಡಿಯ ಒಳಗೆ ಬರೋಬ್ಬರಿ 40 ಕೆಜಿಯಷ್ಟು ಆರ್.ಡಿ.ಎಕ್ಸ್ ಸ್ಪೋಟದಿಂದ ನಮ್ಮ ಸೈನಿಕರ ಅಮೂಲ್ಯ ಜೀವವು ಹೋಗುವಂತಾಯಿತು.

ಅಚ್ಚರಿ ಎಂದರೆ ಇಲ್ಲಿಯವರೆಗೂ ಕೂಡಾ ಪುಲ್ವಾಮ ಗಡಿಯಲ್ಲಿ ಆರ್.ಡಿ.ಎಕ್ಸ್ ಹೇಗೆ ಬಂತು ಎಂಬುದರ ಬಗ್ಗೆ ಯಾವ ತನಿಖೆಯೂ ಆಗಿಲ್ಲ. ಈಗ ಮತ್ತೆ ಲೋಕಸಭೆಯೊಳಗೆ ಭದ್ರತಾ ವೈಫಲ್ಯದಿಂದಾಗಿ ಆತಂಕ ಸೃಷ್ಟಿ ಆಗಿದ್ದು ನಮ್ಮ ಮೈಸೂರಿನ ಸಂಸದರೇ ಆಗಂತುಕ ಆರೋಪಿಗೆ ಪಾಸ್ ನೀಡಿರುದು ಸ್ಪಷ್ಟವಾಗಿದೆ.

ಒಂದು ವೇಳೆ ಅಲ್ಲಿ ಏನಾದರೂ ದೊಡ್ಡ ಅನಾಹುತ ಘಟಿಸಿದ್ದರೆ ಅದಕ್ಕೆ ಯಾರು ಜವಾಬ್ದಾರಿ? ಭದ್ರತಾ ದೃಷ್ಟಿಯಿಂದ ಸಂಸದ ಪ್ರತಾಪ್ ಅವರನ್ನು ತನಿಖೆಗೆ ಒಳಪಡಿಸಬೇಕು ಮತ್ತು ಇದರ ಹಿಂದಿನ ನೈಜ ಕಾರಣಗಳನ್ನು ಪತ್ತೆ ಹಚ್ಚಬೇಕು ಎಂದು ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.