ಸಾರಾಂಶ
ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆ ನಡೆಸುವ ವಿಶ್ವದ ಅತಿ ಜನಪ್ರಿಯ ನಾಯಕರ ಸಮೀಕ್ಷೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತೆ ನಂ.1 ನಾಯಕನಾಗಿ ಹೊರಹೊಮ್ಮಿದ್ದಾರೆ.
ನವದೆಹಲಿ: ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆ ನಡೆಸುವ ವಿಶ್ವದ ಅತಿ ಜನಪ್ರಿಯ ನಾಯಕರ ಸಮೀಕ್ಷೆಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತೆ ನಂ.1 ನಾಯಕನಾಗಿ ಹೊರಹೊಮ್ಮಿದ್ದಾರೆ. ಮೋದಿಗೆ ಶೇ.76 ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನಂತರದ ಸ್ಥಾನದಲ್ಲಿ ಮೆಕ್ಸಿಕೋ ಅಧ್ಯಕ್ಷ ಲೋಪೆಜ್ (ಶೇ.66), ಸ್ವಿಸ್ ಅಧ್ಯಕ್ಷ ಅಲೈನ್ ಬೆರ್ಸೆಟ್ (ಶೇ.58), ಬ್ರೆಜಿಲ್ ಅಧ್ಯಕ್ಷ ಲುಲಾ ಡ ಸಿಲ್ವಾ (ಶೇ.56) ಇದ್ದಾರೆ.