ಸಾರಾಂಶ
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಅಂಗಾಂಗ ಕಸಿ ಕೇಂದ್ರ ಸ್ಥಾಪನೆಗೆ ಮಂಜೂರಾತಿ ನೀಡಿದ್ದು, ಅಂಗಾಂಗ ಸಾಗಣೆಗೆ ಅನುವಾಗುವಂತೆ ಆಸ್ಪತ್ರೆ ಆವರಣದಲ್ಲಿ ಹೆಲಿಪ್ಯಾಡ್ ಕೂಡ ನಿರ್ಮಾಣ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರು : ಅಂಗಾಂಗ ದಾನ ಉತ್ತೇಜಿಸಲು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಅಂಗಾಂಗ ಕಸಿ ಕೇಂದ್ರ ಸ್ಥಾಪನೆಗೆ ಮಂಜೂರಾತಿ ನೀಡಿದ್ದು, ಅಂಗಾಂಗ ಸಾಗಣೆಗೆ ಅನುವಾಗುವಂತೆ ಆಸ್ಪತ್ರೆ ಆವರಣದಲ್ಲಿ ಹೆಲಿಪ್ಯಾಡ್ ಕೂಡ ನಿರ್ಮಾಣ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಸಂಭಾವ್ಯ ಅಂಗಾಂಗ ದಾನಿಗಳ ಗುರುತಿಸುವಿಕೆ ಮತ್ತು ಸುರಕ್ಷಿತ ಅಂಗಾಂಗ ದಾನ ಪ್ರಕ್ರಿಯೆಗೆ ಕುಟುಂಬ ಸಮಾಲೋಚನೆ, ಉನ್ನತ ಮಟ್ಟದ ಐಸಿಯು ಆರೈಕೆ ಮತ್ತು ಕಾನೂನು ಕ್ರಮ ಸೇರಿದಂತೆ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲು ಅಂಗಾಂಗ ಕಸಿ ಹಾಗೂ ಅಂಗಾಂಗ ಮರು ಪಡೆಯುವ ಕೇಂದ್ರ ನೆರವಾಗಲಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೇಂದ್ರ ಸ್ಥಾಪಿಸಲು ₹1 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ 125ನೇ ವರ್ಷಾಚರಣೆ ಸಂದರ್ಭದಲ್ಲಿಯೇ ಅಂದರೆ ಮುಂದಿನ 3-4 ತಿಂಗಳಲ್ಲಿ ಈ ಮಹತ್ವದ ಕೇಂದ್ರ ಕಾರ್ಯಾರಂಭ ಮಾಡಲಿದೆ.
ಮೃತ ದಾನಿಗಳಿಂದ ಅಂಗಗಳನ್ನು ಸಂಗ್ರಹಿಸುವ ವಿಶೇಷ ಘಟಕವಾಗಿ ಕಾರ್ಯನಿರ್ವಹಿಸುತ್ತದೆ. ಈ ಕೇಂದ್ರದಲ್ಲಿ ಐಸಿಯು, ಶಸ್ತ್ರಚಿಕಿತ್ಸಾ ಕೊಠಡಿ, ಪ್ರಯೋಗಾಲಯ ಸೌಲಭ್ಯ ಸೇರಿ ಎಲ್ಲಾ ರೀತಿಯ ಸೌಲಭ್ಯ ಇರಲಿದೆ ಎಂದು ಹೇಳಿದ್ದಾರೆ.