ಬರದಿಂದ ಸಂಕಷ್ಟದಲ್ಲಿರುವ ರೈತರಿಗೆ ಸ್ಪಂದಿಸಿಪಾಂಡವಪುರ: ಬರದಿಂದ ಸಂಕಷ್ಟದಲ್ಲಿರುವ ರೈತರು, ಜನಸಾಮಾನ್ಯರ ಕೆಲಸಗಳಿಗೆ ಸ್ಪಂದಿಸಿ ಕೆಲಸ ಮಾಡುವಂತೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಟ್ಟಣದ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಬರ ಪರಿಹಾರ ಸಮಿತಿ ಹಾಗೂ ಟಾಸ್ಕ್ಪೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಎದುರಾಗಿರುವ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬರದ ಪರಿಸ್ಥಿತಿಯಿಂದ ತಾಲೂಕಿನಲ್ಲಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅಧಿಕಾರಿಗಳು ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂಧಿಸಬೇಕು. ಕಾಲಮಿತಿಯೊಳಗೆ ಗುಣಮಟ್ಟದಿಂದ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಜನತೆಗೆ ನೆರವಾಗಬೇಕು ಎಂದು ಸೂಚಿಸಿದರು.