ಬಗರ್ ಹುಕುಂ ಯೋಜನೆಗೆ ಪ್ರಸ್ತಾವನೆ ಸಿದ್ಧಪಡಿಸಿಬಗರ್ ಹುಕುಂ ಯೋಜನೆಗೆ ಸಂಬಂಧಿಸಿದಂತೆ ಗುಬ್ಬಿ, ತುರುವೇಕೆರೆ ಹಾಗೂ ಮಧುಗಿರಿ ತಾಲೂಕುಗಳಿಂದ ಮಾತ್ರ ಪ್ರಸ್ತಾವನೆ ಸಲ್ಲಿಸಲಾಗಿದೆ. ಉಳಿದ ತಾಲೂಕುಗಳು ಆದಷ್ಟು ಬೇಗ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸಲ್ಲಿಸಬೇಕೆಂದು ತಹಸೀಲ್ದಾರರಿಗೆ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಸೂಚಿಸಿದರು.