ಬೆಂಗಳೂರು : ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿರುದ್ಧ ಹೋರಾಟ ತೀವ್ರಕ್ಕೆ ಸಂಘಟನೆ ಸಿದ್ಧತೆನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಪರಿಣಾಮ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿದಿದ್ದು, ಈ ನಡುವೆ ಏರಿಸಿರುವ ದರ ಹಿಂಪಡೆಯುವಂತೆ ‘ಮೆಟ್ರೋ ಪ್ರಯಾಣಿಕರ ಸಂಘಟನೆ’ ಹೋರಾಟವನ್ನು ತೀವ್ರಗೊಳಿಸಲು ಮುಂದಾಗಿದ್ದು, ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲು ನಿರ್ಧರಿಸಿದೆ.