ಪೂಜ್ಯರು ಮಠದ ಆರ್ಥಿಕತೆಗಿಂತ ಅಡುಗೆ ಉಗ್ರಾಣದಲ್ಲಿರುವ ಅಕ್ಕಿಬೇಳೆಗಳ ಕಡೆಗೆ ಸದಾ ಗಮನ. ಏಕೆಂದರೆ, ಹಸಿದ ಹೊಟ್ಟೆಗೆ ಶಿವ ಭಕ್ತಿ ತಲುಪದು ಎಂಬುದು ಅವರ ನಿಲುವಾಗಿತ್ತು. ಹಾಗಾಗಿ ನಾವು ಅವರ ದಾಸೋಹ ಪ್ರಜ್ಞೆಯನ್ನು ಅನುಸರಿಸಬೇಕು. ನಮ್ಮ ಜೀವನದಲ್ಲಿ ಹಸಿದ ಹೊಟ್ಟೆಗಳಿಗೆ ಉಣಬಡಿಸಿ ಪುಣ್ಯದ ಪಾಲು ಪಡೆಯಬೇಕು.
ಚಾಮರಾಜಪೇಟೆ ಈದ್ಗಾ ಮೈದಾನ ಸೇರಿ ವಿವಿಧೆಡೆಗಳಲ್ಲಿ ಪವಿತ್ರ ರಂಜಾನ್ (ಈದ್-ಉಲ್-ಫಿತ್ರ) ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಸಾಮೂಹಿಕ ಪ್ರಾರ್ಥನೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಅನೇಕರು ವಕ್ಫ್ ಕಾಯಿದೆ ವಿರೋಧಿಸಿ ಕೈಗೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ವ್ಯಕ್ತಪಡಿಸಿದರು.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ ಅಂಗಾಂಗ ಕಸಿ ಕೇಂದ್ರ ಸ್ಥಾಪನೆಗೆ ಮಂಜೂರಾತಿ ನೀಡಿದ್ದು, ಅಂಗಾಂಗ ಸಾಗಣೆಗೆ ಅನುವಾಗುವಂತೆ ಆಸ್ಪತ್ರೆ ಆವರಣದಲ್ಲಿ ಹೆಲಿಪ್ಯಾಡ್ ಕೂಡ ನಿರ್ಮಾಣ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ₹18.85 ಕೋಟಿ ಮೌಲ್ಯದ ಒಟ್ಟು 8.27 ಎಕರೆ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸಿರುವ ಬೆಂಗಳೂರು ನಗರ ಜಿಲ್ಲಾಡಳಿತ ತನ್ನ ವಶಕ್ಕೆ ಪಡೆದಿದೆ.
ನೂರನೇ ವರ್ಷದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘ: ರಾಷ್ಟ್ರೀಯ ಪುನರ್ ನಿರ್ಮಾಣ ಆಂದೋಲನ ಸಾಗಿದ ಮಾರ್ಗ
ದೇಶದ ಮೂಲ ಸಮಸ್ಯೆಗೆ ಪರಿಹಾರ ಕೊಟ್ಟ ಡಾಕ್ಟರ್ಜಿ!
ಪಂಡಿತ್ ಎಂ. ವೆಂಕಟೇಶ್ ಕುಮಾರ್, ಹಿರಿಯ ಕವಿ ಬಿ.ಆರ್.ಲಕ್ಷ್ಮಣರಾವ್, ಗಿರೀಶ್ ಕಾಸರವಳ್ಳಿ, ಚಿತ್ರಕಲಾವಿದ ಪ.ಸ.ಕುಮಾರ್ ಹಾಗೂ ನಟಿ ಅಕ್ಷತಾ ಪಾಂಡವಪುರ ಅವರು 2025ನೇ ಸಾಲಿನ ‘ಕನ್ನಡಪ್ರಭ’ ಹಾಗೂ ‘ಏಷ್ಯಾನೆಟ್ ಸುವರ್ಣ ನ್ಯೂಸ್’ ಯುಗಾದಿ ಸಂಭ್ರಮದ ‘ಯುಗಾದಿ ಪುರಸ್ಕಾರ’ಕ್ಕೆ ಭಾಜನ
ಹೊಸ ವರ್ಷ ಯುಗಾದಿಯನ್ನು ಸಂಭ್ರಮದಿಂದ ಸ್ವಾಗತಿಸಲು ಸಿಲಿಕಾನ್ ಸಿಟಿ ಸಜ್ಜಾಗಿದೆ. ದೇವಸ್ಥಾನಗಳಲ್ಲಿ ವಿಶೇಷ ಪೂಜಾ ಕೈಂಕರ್ಯ, ಮನೆಗಳಲ್ಲಿ ಬೇವು ಬೆಲ್ಲ ವಿತರಣೆ ಆಗಲಿದೆ. ಶನಿವಾರ ನಗರದ ಕೆ.ಆರ್.ಮಾರುಕಟ್ಟೆ ಸೇರಿ ಎಲ್ಲ ವ್ಯಾಪಾರಿ ಕೇಂದ್ರಗಳಲ್ಲಿ ಹಬ್ಬದ ಖರೀದಿ ಜೋರಾಗಿ ನಡೆಯಿತು.