ಕನ್ನಡ ಭಾಷೆಗೆ 2000 ವರ್ಷ ಇತಿಹಾಸವಿದೆ - ತನ್ನದೇ ಅಸ್ಮಿತೆಯನ್ನು ಒಳಗೊಂಡಿದೆ : ಮುನಿರಾಜುಕನ್ನಡ ಭಾಷೆಗೆ ಸುಮಾರು 2000ಕ್ಕೂ ಹೆಚ್ಚು ವರ್ಷಗಳ ಇತಿಹಾಸವಿದ್ದು, ಭಾಷೆ, ಬದುಕು, ಸಾಹಿತ್ಯ, ಸಂಸ್ಕೃತಿ ಬೆಳವಣಿಗೆಯಲ್ಲಿ ಕನ್ನಡ ಭಾಷೆಯು ತನ್ನದೇ ಅಸ್ಮಿತೆಯನ್ನು ಒಳಗೊಂಡಿದೆ. ಪ್ರಾಚೀನ ಕಾಲದಿಂದಲೂ ಶಾಸನಗಳಲ್ಲಿ ಕನ್ನಡ ಭಾಷೆ ಬಳಕೆಯಾಗಿರುವುದು ಕಂಡು ಬರುತ್ತದೆ ಎಂದು ಶಾಸಕ ಎಸ್.ಮುನಿರಾಜು ತಿಳಿಸಿದರು.