ಬಾಟಂ...ಕಾಮನ್ ಪುಟಕ್ಕೆ,, 23 ರಂದು ರೈತರ ಬೃಹತ್ ಅಧಿವೇಶನ23 ರಂದು ರೈತರ ಬೃಹತ್ ಅಧಿವೇಶನ, ಮೈಸೂರು- ಬೆಂಗಳೂರಿನಲ್ಲಿ ನಡೆಯಲಿರುವ ಕಾರ್ಯಕ್ರಮ: ಕುರುಬೂರು ಶಾಂತಕುಮಾರ್ದೇಶದ ಎಲ್ಲಾ ರಾಜ್ಯಗಳಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆಯಿಂದ ಕಿಸಾನ್ ಮಹಾ ಪಂಚಾಯತ್ ಕೇರಳದ ಪಾಲಕಾಡನಲ್ಲಿ ಡಿ.20, ತಮಿಳುನಾಡಿನ ಚೆನ್ನೈನಲ್ಲಿ ಡಿ.21, ಕರ್ನಾಟಕದ ಬೆಂಗಳೂರಿನಲ್ಲಿ ಡಿ.23, ತೆಲಂಗಾಣದ ಹೈದರಾಬಾದ್ ನಲ್ಲಿ ಡಿ.26 ರಂದು ರೈತರ ಬೃಹತ್ ಅಧಿವೇಶನಗಳನ್ನು ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ರೈತರ ಎಚ್ಚರಿಕೆಯ ಶಕ್ತಿ ಪ್ರದರ್ಶನ ಮಾಡಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ, ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ತಿಳಿಸಿದರು.