ನಗರ ಹೊರವಲಯದ ನಾಗಾರ್ಜುನ ಎಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ವಿವಿಧ ಕಂಪನಿಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳನ್ನು ಗುರುತಿಸಿ ಸನ್ಮಾನಿಸುವ ನಿಟ್ಟಿನಲ್ಲಿ ಸಾಧಕರ ದಿನವನ್ನು ಆಚರಿಸಲಾಯಿತು. ಈ ವೇಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಪ್ರಾಂಶುಪಾಲ ಡಾ.ಜಿ ತಿಪ್ಪೇಸ್ವಾಮಿ, ನಾಗಾ ಲೋಟದಲ್ಲಿರುವ ತಂತ್ರಜ್ಞಾನ ಮತ್ತು ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಕೌಶಲ್ಯಾಧಾರಿತ ಶಿಕ್ಷಣ ಬಹುಮುಖ್ಯ. ಈ ನಿಟ್ಟಿನಲ್ಲಿ ನಮ್ಮ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ ಶ್ಲಾಘನೀಯ. ಆದ್ದರಿಂದ ಸಾಧಕರನ್ನು ಗುರುತಿಸಿ ಗೌರವಿಸುವ ಕೆಲಸಕ್ಕೆ ಮುಂದಾಗಿದ್ದೇವೆ ಎಂದರು.