ಸಮಾಜ ಸುಧಾರಣೆಗೆ ಕನಕದಾಸರ ಕೊಡುಗೆ ಅಪಾರ - ಕೆ. ವೆಂಕಟೇಶ್ಜನರಿಗೆ ಅರ್ಥವಾಗುವ ಸರಳ ಕೀರ್ತನೆಗಳನ್ನು ರಚಿಸುವ ಮೂಲಕ ಸಾಮಾಜಿಕ ಬದಲಾವಣೆಗೆ ಹೆಚ್ಚಿನ ಒತ್ತು ನೀಡಿದ ಕನಕದಾಸರು ಸಮಾಜ ಸುಧಾರಣೆಗೆ ಅಪಾರ ಕೊಡುಗೆ ನೀಡಿದ್ದಾರೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ತಿಳಿಸಿದರು. ನಗರದ ಜಿಲ್ಲಾಡಳಿತ ಭವನದ ಅವರಣದಲ್ಲಿರುವ ವರನಟ ಡಾ. ರಾಜ್ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ಭಕ್ತ ಶ್ರೇಷ್ಠ ಶ್ರೀ ಕನಕದಾಸ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕನಕದಾಸರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಅವರು ಮಾತನಾಡಿದರು