ಹಸಿರು ಪಟಾಕಿ ಬಳಕೆಗೆ ನಗರಸಭೆ ಸೂಚನೆ ನಗರಸಭಾ ವ್ಯಾಪ್ತಿಯಲ್ಲಿ ಹಸಿರು ಪಟಾಕಿಗಳ ಹೊರತು ಇತರೆ ಪಟಾಕಿಗಳ ಮಾರಾಟ ಹಾಗೂ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ನಗರಸಭೆ ತಿಳಿಸಿದೆ. ದೀಪಾವಳಿ ಹಬ್ಬದಂದು ಪಟಾಕಿಗಳನ್ನು ಸಿಡಿಸುವುದರಿಂದ ವಾಯು ಮಾಲಿನ್ಯ ಹೆಚ್ಚಾಗುವುದಲ್ಲದೇ, ಶಬ್ದ ಮಾಲಿನ್ಯ ಉಂಟಾಗಿ ಮನುಷ್ಯ ಮತ್ತು ಜೀವ ಸಂಕುಲದ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟಾಗುತ್ತಿದೆ.