ನಾಳೆಯಿಂದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಚಾಮರಾಜನಗರ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ 14 ರಿಂದ 17 ವರ್ಷ ವಯೋಮಿತಿಯ ಬಾಲಕ, ಬಾಲಕಿಯರ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಶಾಲಾ ಮತ್ತು ಪ್ರೌಢಶಾಲಾ ಮಕ್ಕಳ ಅಥ್ಲೆಟಿಕ್ಸ್ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಅ. 26ರಂದು ಬೆಳಗ್ಗೆ 9 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.