ಜೀವನದಲ್ಲಿ ನಿರ್ದಿಷ್ಟ ಗುರಿಯೊಂದಿದ್ದರೆ ಸಾಧನೆ ಸರಳನಗರದ ಸರ್ಕಾರಿ ಕಲಾ ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜು - ಸ್ವಾಯತ ಕಾಲೇಜಿನಲ್ಲಿ ಆಯೋಜಿಸಿದ್ದ ೨೦೨೩- ೨೪ ನೇ ಸಾಲಿನ ಸಹಪಠ್ಯ ಚಟುವಟಿಕೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಲೇಜು ಜೀವನದಲ್ಲಿ ವಿದ್ಯಾರ್ಥಿಗಳು ಚಂಚಲ ಮನಸ್ಥಿತಿಯನ್ನಿಟ್ಟುಕೊಂಡಿರುವುದು ಸಹಜ. ಆದರೆ ಮುಂದಿನ ಜೀವನದ ಶೈಕ್ಷಣಿಕ ಅಭಿವೃದ್ಧಿಯೂ ಮುಖ್ಯವಾಗುತ್ತದೆ ಎಂಬುದನ್ನು ಮರೆಯಬಾರದು. ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಯಲ್ಲಿ ಶಾಸಕರಾದ ರೇವಣ್ಣ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರ ಕೊಡುಗೆ ಸ್ಮರಿಸಿದ ಅವರು, ಮಾಜಿ ಶಾಸಕ ಎಚ್.ಎಸ್. ಪ್ರಕಾಶ್ ಅವರು ಜಿಲ್ಲಾ ಕಾಲೇಜುಗಳ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿದ್ದಾಗ ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಕಾಯುತ್ತಿದ್ದರು ಎಂದು ತಿಳಿಸಿದರಲ್ಲದೇ ಕಾಲೇಜಿನ ಯಾವುದೇ ಸಮಸ್ಯೆಗಳಿದ್ದರೂ ಶೀಘ್ರವಾಗಿ ಬಗೆಹರಿಸುವುದಾಗಿ ಭರವಸೆ ನೀಡಿದರು.