ಐತಿಹಾಸಿಕ ಬಸವನಗುಡಿ ಕಡಲೆಕಾಯಿ ಪರಿಷೆ ನ.25, 26ರಂದು ನಡೆಯಲಿದ್ದು, ಇದೇ ಮೊದಲ ಬಾರಿಗೆ ಮಳಿಗೆಗಳಿಂದ ಯಾವುದೇ ಶುಲ್ಕ ಪಡೆಯದಿರಲು ನಿರ್ಧರಿಸಲಾಗಿದೆ.
ರಾಜ್ಯದ ಮಾಹಿತಿ ತಂತ್ರಜ್ಞಾನ ಕ್ಷೇತ್ರಕ್ಕೆ ಉತ್ತೇಜನ ನೀಡುವ 27ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆ ನ.19ರಿಂದ 21ರವರೆಗೆ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆಯಲಿದ್ದು, ಅದಕ್ಕಾಗಿ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯವು ಹೆಬ್ಬಾಳದ ಜಿಕೆವಿಕೆಯಲ್ಲಿ ಆಯೋಜಿಸಿರುವ ‘ಕೃಷಿ ಮೇಳ’ಕ್ಕೆ ಮೂರನೇ ದಿನವಾದ ಶನಿವಾರ ಲಕ್ಷಾಂತರ ಸಾರ್ವಜನಿಕರು ಭೇಟಿ ನೀಡಿದ್ದು ಭರ್ಜರಿ ವಹಿವಾಟು ನಡೆಯಿತು.
ಒಂದೇ ಸೂರಿನಡಿ ಲೇಖಕರು, ಪ್ರಕಾಶಕರು ಹಾಗೂ ಸಾಹಿತ್ಯಾಸಕ್ತರ ಸಮಾಗಮಕ್ಕೆ ವೇದಿಕೆಯಾಗಿದ್ದ ಮೂರು ದಿನಗಳ ಕನ್ನಡ ಪುಸ್ತಕ ಪ್ರದರ್ಶನ ಮತ್ತು ಮಾರಾಟದ ‘ವೀರಲೋಕ ಪುಸ್ತಕ ಸಂತೆ-2’ಕ್ಕೆ ಶುಕ್ರವಾರ ಚಾಲನೆ ನೀಡಲಾಯಿತು. |
ಹೆಬ್ಬಾಳದ ಜಿಕೆವಿಕೆಯಲ್ಲಿ ನಡೆಯುತ್ತಿರುವ ‘ಕೃಷಿ ಮೇಳ’ದಲ್ಲಿ ‘ಕೊಕೊ ಸಾಪ್’ ಹೆಸರಿನಲ್ಲಿ ಮಾರಾಟ ಮಾಡುತ್ತಿದ್ದ ‘ನೀರಾ’ಕ್ಕೆ ಹೆಚ್ಚು ಬೇಡಿಕೆ ಇದ್ದುದು ಕಂಡುಬಂತು.
ನಗರದಲ್ಲಿ ಈವರೆಗೆ 22 ಲಕ್ಷ ಆಸ್ತಿಗಳು ಖಾತಾ ಹೊಂದಿದ್ದು, ಈ ಪೈಕಿ ಖಾತೆ ಹೊಂದಿರದ ಸುಮಾರು 5 ಲಕ್ಷ ಆಸ್ತಿಗಳು ಆಸ್ತಿ ತೆರಿಗೆ ಪಾವತಿಸಿ, ಆಸ್ತಿ ಗುರುತು ಸಂಖ್ಯೆ ಪಡೆದ ಬಳಿಕ ಅವರಿಗೆ ಖಾತಾ ನೀಡುವ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದ ಬಿಬಿಎಂಪಿ
ನಗರ ವ್ಯಾಪ್ತಿಯ ಆಸ್ತಿ ಮಾಲೀಕರು ಇ-ಖಾತಾ ಪಡೆಯುವುದಕ್ಕೂ ಮುನ್ನ ತಮ್ಮ ಆಸ್ತಿಯ ಖಾತಾದಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಸೋಮವಾರದಿಂದ ಅವಕಾಶ ನೀಡಲಾಗುವುದು ಎಂದು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದರು.
ಭಾರತವು ಬುಡಕಟ್ಟು ನಾಯಕ ಮತ್ತು ಸ್ವಾತಂತ್ರ್ಯ ಹೋರಾಟಗಾರ ಪೂಜ್ಯ ಭಗವಾನ್ ಬಿರ್ಸಾ ಮುಂಡಾ ಅವರ ಪರಂಪರೆಯನ್ನು ಆಚರಿಸಲು ಮೀಸಲಾಗಿರುವ ಜನ ಜಾತಿಯ ಗೌರವ ದಿನವನ್ನು ನ.15ರಂದು ಪ್ರತಿ ವರ್ಷ ಆಚರಿಸುತ್ತದೆ.
ಹಲವು ದಶಕಗಳ ಕಾಲ ಹುಟ್ಟಿ ಬೆಳೆದ ಮನೆ, ಬಿತ್ತಿದ ಭೂಮಿ, ಮಠ, ಮಂದಿರದ ಜಾಗವನ್ನು ಇದ್ದಕ್ಕಿದ್ದಂತೆ ತನ್ನದೆನ್ನುವ ವಕ್ಫ್ ಮಂಡಳಿ ವಾದ ಕರ್ನಾಟಕದಲ್ಲಿ ಮಾತ್ರ ನಡೆಯುತ್ತಿಲ್ಲ, ಹಿಂದುಗಳು ಮಾತ್ರ ಆತಂಕಗೊಂಡಿಲ್ಲ. ನೆರೆಯ ಕೇರಳ ರಾಜ್ಯದಲ್ಲಿರುವ ಬಡ ಕ್ರಿಶ್ಚಿಯನ್ ಕುಟುಂಬಗಳಿಗೂ ಈ ಬಿಸಿ ತಟ್ಟಿದೆ.
ಮಿಶ್ರ ಬೇಸಾಯ ಪದ್ಧತಿಯಿಂದ ಕಡಿಮೆ ಖರ್ಚಿನಲ್ಲಿ ಹೆಚ್ಚಿನ ಲಾಭ ಪಡೆಯಬಹುದು. ರೈತರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾಗಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದರು.
special