‘ಕೈಗಾರಿಕೆಗಳಿಗೆ ಪರಿಸರದ ಬಗ್ಗೆ ಕಾಳಜಿಯಿರಲಿ’ತಾಲೂಕು ಅಭಿವೃದ್ಧಿಗೆ ಕೈಗಾರಿಕೆಗಳು ವರದಾನವಾಗಿದೆ. ಆದರೆ, ಕೈಗಾರಿಕೆಗಳ ಆಡಳಿತ ಮಂಡಳಿಗಳು ಪರಿಸರ ಮಾಲಿನ್ಯ ಮಂಡಳಿಯ ನಿಯಮಗಳು ಪಾಲಿಸಬೇಕು. ಪರಿಸರದ ಮೇಲೆ ಪರಿಣಾಮ ಬೀರದಂತೆ ಕೈಗಾರಿಕಾ ತ್ಯಾಜ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದಾಗ ಮಾತ್ರ ಪರಿಸರ ಸಂರಕ್ಷಣೆಗೆ ಅರ್ಥ ಸಿಗಲಿದೆ ಎಂದು ಜಿಲ್ಲಾಧಿಕಾರಿ ಅಕ್ರಂಪಾಷ ಹೇಳಿದರು.