ಸಾರಾಂಶ
ರಾಜ್ಯದ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಇಲಾಖೆಗಳಿಂದ 4 ವರ್ಷಗಳಿಂದ ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ನಿಯೋಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದೆ.
ಬೆಂಗಳೂರು: ರಾಜ್ಯದ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಇಲಾಖೆಗಳಿಂದ 4 ವರ್ಷಗಳಿಂದ ಬಾಕಿ ಇರುವ ವಿದ್ಯಾರ್ಥಿ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ನಿಯೋಗ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಪತ್ರ ಸಲ್ಲಿಸಿದೆ.
ಪದವಿ, ಸ್ನಾತಕೋತ್ತರ ಪದವಿ, ಎಂಜಿನಿಯರಿಂಗ್ ಮೆಡಿಕಲ್ ಸೇರಿ ವಿವಿಧ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2020-21ನೇ ಸಾಲಿನಿಂದ 2023-24ನೇ ಸಾಲಿನವರೆಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯೊಂದರಲ್ಲೇ 4,90,372 ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಬಾಕಿ ಇದೆ. ಅಲ್ಲದೆ ಅನೇಕ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿ ವೇತನ ಬಿಡುಗಡೆಯಾಗಬೇಕಿದೆ. ಬಡ ಕುಟುಂಬದ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ವಿದ್ಯಾರ್ಥಿ ವೇತನದಿಂದ ಅನುಕೂಲ ಆಗುವ ಕಾರಣ ಆದಷ್ಟು ಶೀಘ್ರ ಬಿಡುಗಡೆ ಮಾಡುವಂತೆ ಮನವಿ ಪತ್ರದಲ್ಲಿ ಕೋರಲಾಗಿದೆ.