ಸಾರಾಂಶ
ಬಿಬಿಎಂಪಿ ವ್ಯಾಪ್ತಿಯ ಯಲಹಂಕ ವಲಯದಲ್ಲಿ ಮಂಗಳವಾರ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ಅಧಿಕಾರಿಗಳು ನಡೆಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು
ಬಿಬಿಎಂಪಿ ವ್ಯಾಪ್ತಿಯ ಯಲಹಂಕ ವಲಯದಲ್ಲಿ ಮಂಗಳವಾರ ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ಅಧಿಕಾರಿಗಳು ನಡೆಸಿದ್ದಾರೆ.ಅಂಗಡಿ-ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದರಿಂದ ಸಾರ್ವಜನಿಕರ ಸುರಕ್ಷಿತ ಓಡಾಟಕ್ಕೆ ತೊಂದರೆ ಉಂಟಾಗುತ್ತಿತ್ತು. ಇದನ್ನು ಬಿಬಿಎಂಪಿ ಅಧಿಕಾರಿಗಳು ಗಮನಿಸಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಮಾಡಿದ್ದಾರೆ.
ಯಲಹಂಕ ರೈತರ ಸಂತೆ (ಜಕ್ಕೂರು ಮುಖ್ಯರಸ್ತೆ), ಬಿ.ಬಿ.ರಸ್ತೆ, ಸರ್ಕಾರಿ ಆಸ್ಪತ್ರೆ ರಸ್ತೆ, ಯಲಹಂಕ ಮತ್ತು ಡೌನ್ ಬಜಾರ್ ರಸ್ತೆಗಳಲ್ಲಿ ತೆರವು ಕಾರ್ಯ ಚರಣೆ ನಡೆಸಲಾಯಿತು. ಮಾರ್ಷಲ್ ಹಾಗೂ ಪೊಲೀಸ್ ಸಿಬ್ಬಂದಿ ಇದ್ದರು. ಇದೇ ವೇಳೆ ಅಂಗಡಿ ಮುಂಗಟ್ಟುಗಳಿಗೆ ದಂಡ ವಿಧಿಸಿ, ₹12000 ದಂಡ ವಿಧಿಸಿ ವಸೂಲಿ ಮಾಡಲಾಗಿದೆ.