ಸಾರಾಂಶ
ಎಲ್ಲರಲ್ಲಿಯೂ ಕಾನೂನು ಅರಿವು ಮೂಡಿದಲ್ಲಿ ಸಮಾಜದಲ್ಲಿ ಶಾಂತಿ ಹಾಗೂ ನೆಮ್ಮದಿಯ ಬದುಕು ಸಾಧ್ಯವಾಗುವ ಜೊತೆಗೆ ಉತ್ತಮ ಸಾಮಾಜಿಕ ಬಾಂಧವ್ಯಗಳನ್ನು ರೂಪಿಸಿಕೊಳ್ಳಲು ಸಾಧ್ಯವಾಗುವುದು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳ ಶಿವಪ್ಪ ತಿಳಿಸಿದರು.
ಕಾನೂನು ಅರಿವಿನಿಂದ ಶಾಂತಿ, ನೆಮ್ಮದಿ: ನ್ಯಾ.ಉಂಡಿ ಮಂಜುಳ ಶಿವಪ್ಪ
ಕನ್ನಡಪ್ರಭ ವಾರ್ತೆ ಗುಬ್ಬಿಎಲ್ಲರಲ್ಲಿಯೂ ಕಾನೂನು ಅರಿವು ಮೂಡಿದಲ್ಲಿ ಸಮಾಜದಲ್ಲಿ ಶಾಂತಿ ಹಾಗೂ ನೆಮ್ಮದಿಯ ಬದುಕು ಸಾಧ್ಯವಾಗುವ ಜೊತೆಗೆ ಉತ್ತಮ ಸಾಮಾಜಿಕ ಬಾಂಧವ್ಯಗಳನ್ನು ರೂಪಿಸಿಕೊಳ್ಳಲು ಸಾಧ್ಯವಾಗುವುದು ಎಂದು ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಉಂಡಿ ಮಂಜುಳ ಶಿವಪ್ಪ ತಿಳಿಸಿದರು.
ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ 100 ವಿದ್ಯಾರ್ಥಿನಿಯರು ಶಿಕ್ಷಕರೊಂದಿಗೆ ನ್ಯಾಯಾಲಯಕ್ಕೆ ಭೇಟಿ ನೀಡಿ ಕಲಾಪ ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಕಾನೂನಿನ ಅರಿವಿನ ಅಗತ್ಯವಿದೆ. ವಿದ್ಯಾರ್ಥಿ ದೆಸೆಯಲ್ಲಿಯೇ ಕಾನೂನು ಅರಿವು ಮೂಡಿಸಿದಲ್ಲಿ ಉತ್ತಮ ಸಮಾಜ ಕಟ್ಟಲು ಸಾಧ್ಯವಾಗುವುದು. ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನ್ಯಾಯಾಲಯದ ಕಲಾಪಗಳಿಗೆ ಅಡ್ಡಿ ಉಂಟಾಗದಂತೆ ವಿದ್ಯಾರ್ಥಿಗಳಿಗೆ ವೀಕ್ಷಣೆ ಮಾಡಲು ಅನುವು ಮಾಡಿಕೊಡಲಾಗಿತ್ತು ಎಂದು ತಿಳಿಸಿದರು. ವಿದ್ಯಾರ್ಥಿನಿ ಪಲ್ಲವಿ ಮಾತನಾಡಿ, ನ್ಯಾಯಾಲಯಕ್ಕೆ ಭೇಟಿ ನೀಡಿ ವಿಚಾರಣೆ ವೀಕ್ಷಣೆ ಮಾಡಿದ್ದು ತುಂಬಾ ಖುಷಿಯಾಗಿರುವ ಜೊತೆಗೆ ಹೆಚ್ಚು ವಿಷಯಗಳನ್ನು ಸಂಗ್ರಹಿಸಲು ಸಾಧ್ಯವಾಗಿದೆ. ಇದು ನಮ್ಮ ಓದಿಗೂ ಅನುಕೂಲವಾಗುವುದು ಎಂದು ತಿಳಿಸಿದರು.ವಿದ್ಯಾರ್ಥಿನಿ ಆಯಿಷಾ ಮಾತನಾಡಿ, ನ್ಯಾಯಾಲಯದ ಕಲಾಪಗಳನ್ನು ಕೇವಲ ಟಿವಿ ಮತ್ತು ಸಿನಿಮಾಗಳಲ್ಲಿ ಮಾತ್ರ ವೀಕ್ಷಿಸುತ್ತಿದ್ದೆವು. ಕಾನೂನು ಸೇವಾ ಪ್ರಾಧಿಕಾರ ವಿಧ್ಯಾರ್ಥಿಗಳಿಗೆ ಅವಕಾಶ ನೀಡಿದ್ದರಿಂದ ಕಲಾಪಗಳನ್ನು ವೀಕ್ಷಿಸಿ ಜಾಗೃತಿ ಮೂಡಿಸಿ ಕೊಳ್ಳುವ ಜೊತೆಗೆ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವಲ್ಲಿ ನ್ಯಾಯಾಧೀಶರು ಹಾಗೂ ವಕೀಲರು ಪ್ರಮುಖ ಪಾತ್ರ ವಹಿಸುತ್ತಿದ್ದಾರೆ ಎನ್ನುವುದು ತಿಳಿದುಬಂತು ಎಂದು ತಿಳಿಸಿದರು.
---19 ಜಿ ಯು ಬಿ 1
ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ನ್ಯಾಯಾಲಯ ವೀಕ್ಷಣೆ ಮಾಡಿದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು .