ಟಿಪ್ಪು ಹೊರದೇಶದವರಾ, ನಮ್ಮೂರಿನವರೇ ಅಲ್ವಾ

| Published : Dec 19 2023, 01:45 AM IST

ಟಿಪ್ಪು ಹೊರದೇಶದವರಾ, ನಮ್ಮೂರಿನವರೇ ಅಲ್ವಾ
Share this Article
  • FB
  • TW
  • Linkdin
  • Email

ಸಾರಾಂಶ

ಟಿಪ್ಪು ಹೊರದೇಶದವರಾ, ನಮ್ಮೂರಿನವರೇ ಅಲ್ವಾ, ಮೈಸೂರು- ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಪ್ರಶ್ನೆ

- ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಪ್ರಶ್ನೆ

---

ಫೋಟೋ- 18ಎಂವೈಎಸ್‌ 34

ಕನ್ನಡಪ್ರಭ ವಾರ್ತೆ ಮೈಸೂರು

ಟಿಪ್ಪು ನಮ್ಮೂರಿನವರೇ ಅಲ್ವಾ? ಅವರೇನು ಹೊರ ದೇಶದವರಾ ಎಂದು ಸಮಾಜ ಕಲ್ಯಾಣ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಪ್ರಶ್ನಿಸಿದರು.

ಸೋಮವಾರ ಸುದ್ದಿಗಾರರೊಡನೆ ಮಾತನಾಡಿದ ಅವರು, ಟಿಪ್ಪು ಹೆಸರನ್ನು ಮೈಸೂರು ವಿಮಾನ ನಿಲ್ದಾಣಕ್ಕೆ ಇಡುವ ಸಂಬಂಧ ಕೆಲವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಹಾಗಾದರೆ ಅಭಿಪ್ರಾಯ ಹೇಳುವುದು ತಪ್ಪಾ? ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲವೇ? ಎಂದು ಕೇಳಿದರು.

ಭೂ ಸುಧಾರಣೆ ಕಾಯ್ದೆ ತಂದವರು, ದೇವದಾಸಿ ಪದ್ಧತಿ ನಿರ್ಮೂಲನೆ ಮಾಡಿದ್ದು ಟಿಪ್ಪು ಅಲ್ವಾ? ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿನ ಬಗ್ಗೆ ನಮ್ಮ ತಕರಾರು ಇಲ್ಲ. ವಿಮಾನ ನಿಲ್ದಾಣ ವಿಚಾರದಲ್ಲಿ ಕ್ಯಾಬಿನೆಟ್ ತೀರ್ಮಾನವಾಗಿದೆ. ಅದನ್ನು ತಿರಸ್ಕರಿಸಲು ಸಾಧ್ಯವಾ? ಹೆಸರು ಇಡುವುದು ಬಿಡುವುದು ಬೇರೆ ವಿಚಾರ. ಆದರೆ ಅವರನ್ನು ದೇಶ ದ್ರೋಹಿ ಅಂತಾ ಬಿಂಬಿಸೋದು ಸರಿಯಲ್ಲ ಎಂದರು.

ಕೋವಿಡ್ ಹೆಚ್ಚಳ ಕುರಿತು ಮೈಸೂರು ಜಿಲ್ಲಾಡಳಿತದ ಜೊತೆಗೆ ಸಭೆ ಮಾಡುತ್ತೇನೆ ಎಂದು ಅವರು ಹೇಳಿದರು.

ಸಂಸತ್ ನಲ್ಲಿ ಸ್ಮೋಕ್ ಬಾಂಬ್ ಒಂದು ಗಂಭೀರವಾದ ರಾಷ್ಟ್ರೀಯ ಭದ್ರತಾ ವಿಚಾರ. ಆರೋಪಿಗಳಿಗೆ ಬೇರೆಯವರು ಲೆಟರ್ ಕೊಟ್ಟಿದ್ದರೆ ಮೈಸೂರು ಗತಿ ಏನಾಗುತ್ತಿತ್ತು?. ಬೇರೆ ಧರ್ಮದವರು ಲೇಟರ್ ಕೊಟ್ಟಿದ್ದರೆ ಗತಿ ಏನಾಗುತ್ತಿತ್ತು? ಲೇಟರ್ ಕೊಟ್ಟಿದ್ದ ಕಾರಣ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟಿಸಿದ್ದಾರೆ. ಒಮೊಮ್ಮೆ ಗಡಿಪಾರು ಆದವರು, ಕೊಲೆ ಆರೋಪಿಗಳು ನಮ್ಮ ಜೊತೆಯೆ ಫೋಟೋ ತೆಗೆಸಿ ಕೊಂಡಿರುತ್ತಾರೆ. ಅದನ್ನು ನಾವು ಗಮನಿಸೋಕೆ ಆಗುತ್ತಾ? ಎಂದು ಅವರು ಹೇಳಿದರು.