ಸಾರಾಂಶ
ಖೇಲೋ ಇಂಡಿಯಾ ಕ್ರೀಡಾಕೂಟವನ್ನು 2018ರಲ್ಲಿ ಆರಂಭಿಸಲಾಗಿತ್ತು. ಆದರೆ 2018ರಿಂದ ಈ ವರೆಗೂ ಖೇಲೋ ಇಂಡಿಯಾ ಗೇಮ್ಸ್‌ನ ಪದಕ ವಿಜೇತ ಕ್ರೀಡಾಪಟುಗಳು ಸರ್ಕಾರಿ ಉದ್ಯೋಗಗಳಿಗೆ ಅರ್ಹರಾಗಿರಲಿಲ್ಲ. ಈಗ ಮಾನದಂಡ ಬದಲಾಯಿಸಲಾಗಿದೆ.
ನವದೆಹಲಿ: ಖೇಲೋ ಇಂಡಿಯಾ ಕ್ರೀಡಾಕೂಟಗಳಲ್ಲಿ ಪದಕ ಗೆಲ್ಲುವ ಅಥ್ಲೀಟ್‌ಗಳೂ ಕೂಡಾ ಇನ್ನು ಮುಂದೆ ಸರ್ಕಾರಿ ಹುದ್ದೆ ಪಡೆಯಲು ಅರ್ಹರು ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರು ಘೋಷಿಸಿದ್ದಾರೆ.
ಈ ಬಗ್ಗೆ ಬುಧವಾರ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಮಾಹಿತಿ ನೀಡಿರುವ ಅನುರಾಗ್ ಠಾಕೂರ್, ‘ಅತ್ಯುತ್ತಮ ಕ್ರೀಡಾ ವ್ಯವಸ್ಥೆ, ತಳಮಟ್ಟದಲ್ಲೇ ಪ್ರತಿಭೆಗಳನ್ನು ಪೋಷಿಸುವುದು ಹಾಗೂ ಕ್ರೀಡಾಪಟುಗಳಿಗೆ ಭವಿಷ್ಯದ ವೃತ್ತಿ ಆಯ್ಕೆ ನೀಡುವುದು ಪ್ರಧಾನಿ ನರೇಂದ್ರ ಮೋದಿ ಅವರ ಕನಸು. ಇದಕ್ಕೆ ಅನುಗುಣವಾಗಿ ಖೇಲೋ ಇಂಡಿಯಾದ ಯೂತ್, ಯುನಿವರ್ಸಿಟಿ, ಪ್ಯಾರಾ ಹಾಗೂ ಚಳಿಗಾಲದ ಕ್ರೀಡಾಕೂಟಗಳಲ್ಲಿ ಪದಕ ಗೆದ್ದವರು ಇನ್ನು ಮುಂದೆ ಸರ್ಕಾರಿ ಹುದ್ದೆಗೆ ಅರ್ಹತೆ ಪಡೆಯಲಿದ್ದಾರೆ. ಇದು ಭಾರತವನ್ನು ಕ್ರೀಡಾ ಕ್ಷೇತ್ರದಲ್ಲಿ ಸೂಪರ್ ಪವರ್ ಮಾಡುವಲ್ಲಿ ಮಹತ್ವದ ಹೆಜ್ಜೆ’ ಎಂದು ಅವರು ತಿಳಿಸಿದ್ದಾರೆ. ಸಿಬ್ಬಂದಿ, ತರಬೇತಿ ಇಲಾಖೆ ಮತ್ತು ಯುವ ವ್ಯವಹಾರಗಳು ಹಾಗೂ ಕ್ರೀಡಾ ಸಚಿವಾಲಯದೊಂದಿಗೆ ಚರ್ಚಿಸಿದ ನಂತರ ಸರ್ಕಾರಿ ಉದ್ಯೋಗಗಳ ಮಾನದಂಡಗಳನ್ನು ಬದಲಾಯಿಸಲಾಗಿದೆ ಎಂದು ಘೋಷಿಸಲು ಸಂತಸವಾಗುತ್ತಿದೆ. ಸಂತೋಷವಾಗಿದೆ. ಎಲ್ಲಾ ಖೇಲೋ ಇಂಡಿಯಾ ಸ್ಪರ್ಧೆಗಳಲ್ಲಿ ಪದಕ ವಿಜೇತರು ಈಗ ಪರಿಷ್ಕೃತ ಮಾನದಂಡಗಳ ಪ್ರಕಾರ ಸರ್ಕಾರಿ ಉದ್ಯೋಗಗಳಿಗೆ ಅರ್ಹರಾಗಿರುತ್ತಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.ಖೇಲೋ ಇಂಡಿಯಾ ಕ್ರೀಡಾಕೂಟವನ್ನು 2018ರಲ್ಲಿ ಆರಂಭಿಸಲಾಗಿತ್ತು.