ಅಥ್ಲೆಟಿಕ್ಸ್: ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ವಿದ್ಯಾರ್ಥಿಗಳು ಆಯ್ಕೆ

| Published : Nov 06 2023, 12:48 AM IST

ಅಥ್ಲೆಟಿಕ್ಸ್: ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ವಿದ್ಯಾರ್ಥಿಗಳು ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಅಥ್ಲೆಟಿಕ್ಸ್: ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ವಿದ್ಯಾರ್ಥಿಗಳು ಆಯ್ಕೆಬಿ.ಹೊಸೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮೂವರು ವಿದ್ಯಾರ್ಥಿಗಳು ಆಯ್

ಬಿ.ಹೊಸೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮೂವರು ವಿದ್ಯಾರ್ಥಿಗಳು ಆಯ್ಕೆ

ಕನ್ನಡಪ್ರಭ ವಾರ್ತೆ ಮಂಡ್ಯ

ತಾಲೂಕಿನ ಬಿ.ಹೊಸೂರು ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದು, ಶಾಲೆಯ ಶಿಕ್ಷಕರು ಹಾಗೂ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.

ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ 3000 ಮೀ., ನಡಿಗೆ ಸ್ಪರ್ಧೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಎಚ್.ಪಿ.ಸಂಕಲ್ಪ ಪ್ರಥಮ, 10 ನೇ ತರಗತಿ ವಿದ್ಯಾರ್ಥಿನಿ ಎಚ್.ಕೆ.ಅನುಶ್ರೀ ದ್ವಿತೀಯ, 5000 ಮೀ ಬಾಲಕರ ನಡಿಗೆ ಸ್ಪರ್ಧೆಯಲ್ಲಿ 10 ನೇ ತರಗತಿ ಎಚ್. ಜಿ.ಗೌತಮ್ ದ್ವಿತೀಯ ಸ್ಥಾನ ಪಡೆದು ಈ ಮೂವರು ಕ್ರೀಡಾಪಟುಗಳು ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನ.16 ರಿಂದ 18 ರವರೆಗೆ ನಡೆಯುವ ರಾಜ್ಯ ಮಟ್ಟದ ಪ್ರೌಢಶಾಲಾ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮಂಡ್ಯ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

ಪ್ರಸಕ್ತ ಸಾಲಿನ ಕ್ರೀಡಾ ಕೂಟದಲ್ಲಿ ಶಾಲೆಯ ವಿದ್ಯಾರ್ಥಿಗಳು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ತಂಡ ಪ್ರಶಸ್ತಿ ಪಡೆದಿದ್ದರು. ನಿರಂತವಾಗಿ 13 ವರ್ಷಗಳಿಂದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಾ ಬಂದಿದ್ದಾರೆ. 2016ರಲ್ಲಿ ಕೇರಳ, 2018ರಲ್ಲಿ ದೆಹಲಿ, 2019ರಲ್ಲಿ ಪಂಜಾಬ್‌ನಲ್ಲಿ ಇದೇ ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಕ್ರೀಡಾಕೂಟದ ನಡಿಗೆ ಸ್ಪರ್ಧೆಯಲ್ಲಿ ಭಾಗವಹಿಸಿದ್ದಾರೆ.

ವಿಜೇತ ವಿದ್ಯಾರ್ಥಿಗಳನ್ನು ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಸನ್ಮಾನಿಸಿ ಅಭಿನಂದಿಸಿದ್ದಾರೆ.