ಸಾರಾಂಶ
ಕನ್ನಡಪ್ರಭ ವಾರ್ತೆ ಬೆಂಗಳೂರು ಕರ್ನಾಟಕ ಈಗ ಅಂತಾರಾಷ್ಟ್ರೀಯ ಗ್ರ್ಯಾಂಡ್ ಮಾಸ್ಟರ್ಸ್, ಗ್ರ್ಯಾಂಡ್ ಮಾಸ್ಟರ್ಸ್‌ಗಳನ್ನು ಹೊಂದಿದ್ದು, ಅದರ ಸಂಖ್ಯೆ ಏರಿಕೆಯಾಗುತ್ತಿದೆ. ಬೆಂಗಳೂರು ಅಂತಾರಾಷ್ಟ್ರೀಯ ಗ್ರ್ಯಾಂಡ್ ಮಾಸ್ಟರ್ಸ್ ಓಪನ್ ಚೆಸ್ ಟೂರ್ನಿಯು ಮತ್ತಷ್ಟು ಜನರು ಚೆಸ್‌ನತ್ತ ಹೊರಳಲು ಪ್ರೇರಣೆಯಾಗಲಿದೆ ಎಂದು ಅಂತಾರಾಷ್ಟ್ರೀಯ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥ್ ಆನಂದ್ ಹೇಳಿದರು. ಬೆಂಗಳೂರು ಜಿಲ್ಲಾ ಚೆಸ್ ಸಂಸ್ಥೆ ಇಲ್ಲಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಸಿದ್ದ ಮೊದಲನೇ ಬೆಂಗಳೂರು ಅಂತಾರಾಷ್ಟ್ರೀಯ ಗ್ರ್ಯಾಂಡ್ ಮಾಸ್ಟರ್ಸ್ ಓಪನ್ ಚೆಸ್ ಪಂದ್ಯಾವಳಿ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಈ ಟೂರ್ನಿಯು ಮುಂಬರುವ ದಿನಗಳಲ್ಲಿ ಭಾರತದಲ್ಲೇ ದೊಡ್ಡ ಮಟ್ಟದ ಪಂದ್ಯಾವಳಿಯಾಗಲಿದೆ ಎಂದರು. ಇದಕ್ಕೂ ಮೊದಲು ಮುಖ್ಯಮಂತ್ರಿ ಸಿದ್ದರಾಮಯ್ಯ ಪಂದ್ಯಾವಳಿಗೆ ಹಾಗೂ ಸಭಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಯವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಡಾ.ಕೆ.ಗೋವಿಂದರಾಜ್, ಹೆಚ್ಚುವರಿ ಮುಖ್ಯಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಎಫ್‌ಇಡಿಇ ಅಡ್ವೈಸರಿ ಬೋರ್ಡ್‌ನ ಚೇರ್ಮನ್ ಭರತ್ ಸಿಂಗ್ ಚೌಹಾಣ್, ಕ್ರೀಡಾ ಇಲಾಖೆ ಆಯುಕ್ತ ಶಶಿಕುಮಾರ್, ಅಖಿಲ ಭಾರತ ಚೆಸ್ ಫೆಡರೇಶನ್ ಕಾರ್ಯದರ್ಶಿ ಎ.ಕೆ.ವರ್ಮಾ, ಕೆಎಸ್‌ಸಿಎ ಅಧ್ಯಕ್ಷ ಡಿ.ಪಿ.ಅನಂತ, ಬೆಂಗಳೂರು ಅರ್ಬನ್ ಡಿಸ್ಟ್ರಿಕ್ಟ್ ಚೆಸ್ ಅಸೋಸಿಯೇಷನ್ ಅಧ್ಯಕ್ಷೆ ಸೌಮ್ಯಾ, ಬಿಯುಡಿಸಿಎ ಉಪಾಧ್ಯಕ್ಷರಾದ ನಳಿನಿ ಕುಮಾರ್, ಭಾರ್ಗವಿ ಭಾರತ್, ಜಯಂತಿ ಹನುಮಂತ, ಕಾರ್ಯದರ್ಶಿ ಶುಭಾ ಹೆಬ್ಬಾರ, ಖಜಾಂಚಿ ವಿದ್ಯಾ ಗುರುರಾಜ್, ಜಂಟಿ ಕಾರ್ಯದರ್ಶಿ ಸುಜಾತಾ ಅರ್ಜುನ್ ಸೇರಿದಂತೆ ಇತರರಿದ್ದರು.26 ವರೆಗೆ ನಡೆಯುವ ಪಂದ್ಯಾವಳಿಯಲ್ಲಿ ಭಾರತ ಸೇರಿದಂತೆ 20 ದೇಶಗಳ 1500ಕ್ಕೂ ಹೆಚ್ಚು ಆಟಗಾರರು ಹಾಗೂ 40ಕ್ಕೂ ಹೆಚ್ಚು ಗ್ರ್ಯಾಂಡ್ ಮಾಸ್ಟರ್ಸ್ ಭಾಗಿಯಾಗಲಿದ್ದಾರೆ.