ಪಾಕ್‌ನಿಂದ ಚಾಂಪಿಯನ್ಸ್‌ ಟ್ರೋಫಿ ಸ್ಥಳಾಂತರಿಸಲು ಐಸಿಸಿ ಮೇಲೆ ಬಿಸಿಸಿಐ ಒತ್ತಡ

| Published : Jul 12 2024, 01:44 AM IST / Updated: Jul 12 2024, 04:51 AM IST

ಪಾಕ್‌ನಿಂದ ಚಾಂಪಿಯನ್ಸ್‌ ಟ್ರೋಫಿ ಸ್ಥಳಾಂತರಿಸಲು ಐಸಿಸಿ ಮೇಲೆ ಬಿಸಿಸಿಐ ಒತ್ತಡ
Share this Article
  • FB
  • TW
  • Linkdin
  • Email

ಸಾರಾಂಶ

ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಎತ್ತಂಗಡಿ ಸಾಧ್ಯತೆ. ಶ್ರೀಲಂಕಾ ಅಥವಾ ಯುಎಇನಲ್ಲಿ ನಡೆಸುವಂತೆ ಐಸಿಸಿ ಮೇಲೆ ಬಿಸಿಸಿಐ ಒತ್ತಡ. ಸಂಕಷ್ಟಕ್ಕೆ ಸಿಲುಕುವ ಭೀತಿಯಲ್ಲಿ ಪಾಕಿಸ್ತಾನ.

ನವದೆಹಲಿ: 2025ರ ಫೆಬ್ರವರಿಯಲ್ಲಿ ನಡೆಯಬೇಕಿರುವ ಚಾಂಪಿಯನ್ಸ್‌ ಟ್ರೋಫಿ ಏಕದಿನ ಟೂರ್ನಿಯನ್ನು ಪಾಕಿಸ್ತಾನದಿಂದ ಸ್ಥಳಾಂತರಿಸಲು ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ(ಐಸಿಸಿ) ಮೇಲೆ ಬಿಸಿಸಿಐ ಒತ್ತಡ ಹೇರುತ್ತಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ. 

ಟೂರ್ನಿಯನ್ನು ಶ್ರೀಲಂಕಾ ಅಥವಾ ಯುಎಇನಲ್ಲಿ ನಡೆಸಲು ಬಿಸಿಸಿಐ ಮನವಿ ಸಲ್ಲಿಸಲಿದೆ ಎಂದು ತಿಳಿದುಬಂದಿದೆ. ಈಗಾಗಲೇ ಟೂರ್ನಿಯ ವೇಳಾಪಟ್ಟಿಯನ್ನು ಪಾಕಿಸ್ತಾನ ಕ್ರಿಕೆಟ್‌ ಮಂಡಳಿ (ಪಿಸಿಬಿ) ಅಂತಿಮಗೊಳಿಸಿದ್ದು, ಭಾರತದ ಎಲ್ಲಾ ಪಂದ್ಯಗಳನ್ನು ಲಾಹೋರ್‌ನಲ್ಲಿ ನಡೆಸುವುದಾಗಿ ಹೇಳಿದೆ. ಭಾರತ ತಂಡ ಪಾಕಿಸ್ತಾನಕ್ಕೆ ತೆರಳಲು ಕೇಂದ್ರ ಸರ್ಕಾರ ಅನುಮತಿ ನೀಡುವುದಿಲ್ಲ ಎಂದು ಹೇಳಲಾಗುತ್ತಿದ್ದು, ಇದೇ ಕಾರಣಕ್ಕೆ ಟೂರ್ನಿ ಸ್ಥಳಾಂತರಕ್ಕೆ ಒತ್ತಡ ಹೇರಲಾಗುತ್ತಿದೆ ಎಂದು ಗೊತ್ತಾಗಿದೆ.