ಸಾರಾಂಶ
ಕ್ರೀಡಾದಿನಾಚರಣೆ ಉದ್ಘಾಟನೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಮಕ್ಕಳು ಮೊಬೈಲ್ ಬಿಟ್ಟು ಆಟದ ಮೈದಾನದಲ್ಲಿ ಕ್ರೀಡೆಯಲ್ಲಿ ಪಾಲ್ಗೊಂಡರೆ ಮಾನಸಿಕ ಮತ್ತು ದೈಹಿಕವಾಗಿ ಸಧೃಢರಾಗಲು ಸಾಧ್ಯವಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್ ತಿಳಿಸಿದರು.ನಗರದ ಪಾರ್ಶ್ವನಾಥ್ ವಿದ್ಯಾ ಸಂಸ್ಥೆ ವತಿಯಿಂದ ಓನಕೆ ಒಬವ್ವ ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕ್ರೀಡಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದ ಅವರು, ಪಾರ್ಶ್ವನಾಥ್ ಸಂಸ್ಥೆ ತನ್ನದೆ ಆದ ಮೌಲ್ಯ ಹೊಂದಿದೆ. ಶಿಕ್ಷಣದ ಜೊತೆಗೆ ಮಾನವೀಯ ಮೌಲ್ಯಗಳನ್ನು ಕಲಿಸುವ ಕೆಲಸ ಮಾಡುತ್ತಿದೆ. ಸಂಸ್ಥೆ ಮುಖ್ಯಸ್ಥರು ದುಡಿಮೆ ಜೊತೆಗೆ ಸಮಾಜ ಸೇವೆಯಾಗಿ ವಿದ್ಯಾ ದಾನವನ್ನು ಮಾಡುತ್ತಿದ್ದಾರೆ. ಶಿಕ್ಷಕರು ಜವಾಬ್ದಾರಿ ಅರಿತು ಭವಿಷ್ಯದ ಉತ್ತಮ ಪೀಳಿಗೆ ನಿರ್ಮಾಣ ಮಾಡುವ ಹೊಣೆ ಹೊರಬೇಕೆಂದರು.
ಮಕ್ಕಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಶ್ರಮ ಹಾಕಬೇಕಿದೆ. ಜಿಲ್ಲಾ, ತಾಲೂಕು ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವುದರ ಮೂಲಕ ತಮ್ಮ ಪ್ರತಿಭೆ ಪ್ರದರ್ಶನ ಮಾಡಬೇಕಿದೆ. ಇದರೊಂದಿಗೆ ಶಾಲಾಮಟ್ಟದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಸಹ ಭಾಗವಹಿಸಬೇಕಿದೆ. ಪ್ರಸ್ತುತ ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸುವುದು ಕಡಿಮೆಯಾಗಿದೆ. ಮೊಬೈಲ್‌ನಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದಾರೆ. ಇದರಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗುವುದಿಲ್ಲ. ಪಠ್ಯದ ಜೊತೆಗೆ ಕ್ರೀಡೆಯಲ್ಲಿ ಸಕ್ರೀಯವಾಗಿ ಭಾಗವಹಿಸುವುದನ್ನು ಕಲಿಯಬೇಕಿದೆ. ಇದರಿಂದ ಮನಸ್ಸು ಮತ್ತು ದೇಹ ಸದೃಢವಾಗಿ ಇರಲು ಸಾಧ್ಯವಿದೆ ಎಂದು ನಾಗಭೂಷಣ ಹೇಳಿದರು.ನಿವೃತ್ತ ದೈಹಿಕ ನಿರ್ದೆಶಕ ಜಯ್ಯಣ್ಣ ಮಾತನಾಡಿ, ಜೈನ್ ಸಮುದಾಯದವರು ಮಕ್ಕಳಿಗೆ ಶಿಕ್ಷಣವನ್ನು ಕೊಡಿಸುವುದರ ಮೂಲಕ ಉತ್ತಮವಾದ ಸೇವೆಯನ್ನು ಮಾಡುತ್ತಿದ್ದಾರೆ. ಮಕ್ಕಳು ದೈಹಿಕವಾಗಿ ಚೆನ್ನಾಗಿ ಇದ್ದರೆ ಉತ್ತಮ ಸಾಧನೆಯನ್ನು ಮಾಡಲು ಸಾಧ್ಯವಿದೆ. ಮೊಬೈಲ್‌ನಿಂದ ಮಕ್ಕಳು ಮಾನಸಿಕವಾಗಿ ಹಿನ್ನಡೆ ಅನುಭವಿಸುತ್ತಿದ್ದಾರೆ. ಸರ್ಕಾರಗಳು ಕ್ರೀಡೆಗಳಿಗೆ ಹೆಚ್ಚಿನ ಪ್ರೋತ್ಸಾಹ ಹಾಗೂ ಪ್ರಾತಿನಿಧ್ಯ ನೀಡುತ್ತಿವೆ ಎಂದರು.
ಪಾರ್ಶ್ವನಾಥ ವಿದ್ಯಾ ಸಂಸ್ಥೆ ಆಧ್ಯಕ್ಷ ಬಾಬುಲಾಲ್ ಮಾತನಾಡಿ, ಮಕ್ಕಳು ಶಿಕ್ಷಣವನ್ನು ಪಡೆಯುವುದರ ಜೊತೆಗೆ ಕ್ರೀಡೆಗೂ ಮಹತ್ವ ನೀಡಬೇಕಿದೆ. ಕ್ರೀಡಾ ಚಟುವಟಿಕೆಯಲ್ಲಿ ಸಕ್ರೀಯವಾಗಿ ಭಾಗವಹಿಸುವುದರ ಮೂಲಕ ಮಾನಸಿಕವಾಗಿ ಸದೃಢರಾಗಲು ಮನವಿ ಮಾಡಿದರು.ಸಂಸ್ಥೆ ಉಪಾಧ್ಯಕ್ಷ ಉತ್ತಮಚಂದ್ ನೀರವ್, ಕಾರ್ಯದರ್ಶಿ ಆಶೋಕ ಕುಮಾರ್, ನಿರ್ದೇಶಕರಾದ ಜುನಾರಿಲಾಲ್, ಸುರೇಶ್ ಮುತ್ತಾ, ಮುಖೇಶ್ ಸೇರಿದಂತೆ ಶಾಲಾ ಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.
- - -ಪಾರ್ಶ್ವನಾಥ ವಿದ್ಯಾ ಸಂಸ್ಥೆ ವತಿಯಿಂದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕ್ರೀಡಾ ದಿನಾಚರಣೆಯನ್ನು ಕ್ಷೇತ್ರಶಿಕ್ಷಣಾಧಿಕಾರಿ ನಾಗಭೂಷಣ್ ಉದ್ಘಾಟಿಸಿದರು.
-18 ಸಿಟಿಡಿ 3--