ಚಾಂಪಿಯನ್ಸ್‌ ಟ್ರೋಫಿ: ಮಾ.1ಕ್ಕೆ ಲಾಹೋರಲ್ಲಿ ಭಾರತ vs ಪಾಕ್‌ ಪಂದ್ಯ ನಿಗದಿ!

| Published : Jul 04 2024, 01:06 AM IST / Updated: Jul 04 2024, 04:25 AM IST

ಚಾಂಪಿಯನ್ಸ್‌ ಟ್ರೋಫಿ: ಮಾ.1ಕ್ಕೆ ಲಾಹೋರಲ್ಲಿ ಭಾರತ vs ಪಾಕ್‌ ಪಂದ್ಯ ನಿಗದಿ!
Share this Article
  • FB
  • TW
  • Linkdin
  • Email

ಸಾರಾಂಶ

ತಾತ್ಕಾಲಿಕ ವೇಳಾಪಟ್ಟಿ ಐಸಿಸಿಗೆ ಸಲ್ಲಿಸಿದ ಪಾಕ್‌ ಮಂಡಳಿ. ಆದರೆ ಭಾರತ ತಂಡ ಪಾಕಿಸ್ತಾನಕ್ಕೆ ತೆರಳುವ ಬಗ್ಗೆ ಬಿಸಿಸಿಐ ಇನ್ನೂ ಮಾಹಿತಿ ನೀಡಿಲ್ಲ.

ಲಾಹೋರ್‌: 2025ರ ಚಾಂಪಿಯನ್ಸ್‌ ಟ್ರೋಫಿಯ ತಾತ್ಕಾಲಿಕ ವೇಳಾಪಟ್ಟಿಯನ್ನು ಟೂರ್ನಿಯ ಆತಿಥ್ಯ ಹಕ್ಕು ಹೊಂದಿರುವ ಪಾಕಿಸ್ತಾನ ಕ್ರಿಕೆಟ್‌ ಮಂಡಳಿ(ಪಿಸಿಬಿ) ಸಿದ್ಧಪಡಿಸಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌(ಐಸಿಸಿ)ಗೆ ಸಲ್ಲಿಸಿದ್ದು, ಭಾರತ ಹಾಗೂ ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಪಂದ್ಯ ಮಾ.1ರಂದು ನಿಗದಿಯಾಗಿದೆ.

ತಾತ್ಕಾಲಿಕ ವೇಳಾಪಟ್ಟಿ ಪ್ರಕಾರ ಟೂರ್ನಿ ಫೆ.19ರಿಂದ ಮಾ.9ರ ವರೆಗೆ ನಡೆಯಲಿದೆ. ಲಾಹೋರ್‌, ಕರಾಚಿ ಹಾಗೂ ರಾವಲ್ಪಿಂಡಿ ಕ್ರೀಡಾಂಗಣಗಳು ಆತಿಥ್ಯ ವಹಿಸಲಿವೆ. ಭಾರತ ಎಲ್ಲಾ ಪಂದ್ಯಗಳು ಲಾಹೋರ್‌ನಲ್ಲೇ ನಡೆಸಲು ಪಿಸಿಬಿ ನಿರ್ಧರಿಸಿದೆ. ಭಾರತ ತಂಡ ಪಾಕಿಸ್ತಾನ, ಬಾಂಗ್ಲಾದೇಶ, ನ್ಯೂಜಿಲೆಂಡ್‌ ಜತೆ ‘ಎ’ ಗುಂಪಿನಲ್ಲಿದ್ದು, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ, ಇಂಗ್ಲೆಂಡ್‌, ಅಫ್ಘಾನಿಸ್ತಾನ ‘ಬಿ’ ಗುಂಪಿನಲ್ಲಿವೆ.

ಇನ್ನೂ ನಿರ್ಧಾರ ಪ್ರಕಟಿಸದ ಬಿಸಿಸಿಐ

ಭಾರತ ತಂಡ ಪಾಕಿಸ್ತಾನಕ್ಕೆ ತೆರಳುವ ಬಗ್ಗೆ ಬಿಸಿಸಿಐ ಇನ್ನೂ ಮಾಹಿತಿ ನೀಡಿಲ್ಲ. ಕೇಂದ್ರ ಸರ್ಕಾರದ ಜೊತೆ ಬಿಸಿಸಿಐ ಅಧಿಕಾರಿಗಳು ಚರ್ಚೆ ನಡೆಸಿ ಶೀಘ್ರದಲ್ಲೇ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳುವ ನಿರೀಕ್ಷೆಯಿದೆ.ಭಾರತ ತಂಡಕ್ಕೆ ಪಾಕ್‌ಗೆ ತೆರಳಲು ಅನುಮತಿ ಸಿಗುವ ಸಾಧ್ಯತೆ ಕಡಿಮೆ. ಒಂದು ವೇಳೆ ಅನುಮತಿ ಸಿಗದಿದ್ದರೆ ಟೂರ್ನಿಗೆ ಭಾರತ ಗೈರಾಗಲಿದೆ ಅಥವಾ ಟೂರ್ನಿ ಬೇರೆಡೆಗೆ ಸ್ಥಳಾಂತರಿಸಬೇಕಾದ/ ಹೈಬ್ರಿಡ್‌ ಮಾದರಿಯಲ್ಲಿ ನಡೆಸಬೇಕಾದ ಅನಿವಾರ್ಯತೆಗೆ ಪಿಸಿಬಿ, ಐಸಿಸಿ ಸಿಲುಕಲಿದೆ.