ಸಾರಾಂಶ
ಲಂಡನ್: 30 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಹಾಲಿ ಚಾಂಪಿಯನ್ ಆಟಗಾರ್ತಿ ವಿಂಬಲ್ಡನ್ ಗ್ರ್ಯಾನ್ ಸ್ಲಾಂನ ಮೊದಲ ಸುತ್ತಿನಲ್ಲೇ ಸೋಲುಂಡಿದ್ದಾರೆ. ಚೆಕ್ ಗಣರಾಜ್ಯದ ಮಾರ್ಕೆಟಾ ವೊಂಡ್ರೌಸೊವಾ ಮಂಗಳವಾರ ಮಹಿಳಾ ಸಿಂಗಲ್ಸ್ ಮೊದಲ ಸುತ್ತಿನಲ್ಲಿ ಸ್ಪೇನ್‌ನ ಜೆಸ್ಸಿಕಾ ಬೌಜಾಸ್ ಮನೇರೊ ವಿರುದ್ಧ 4-6, 2-6 ನೇರ ಸೆಟ್‌ಗಳಲ್ಲಿ ಸೋಲುಂಡರು. 1994ರಲ್ಲಿ ಲೊರಿ ಮೆಕ್‌ನೀಲ್ ಅಂದಿನ ಹಾಲಿ ಚಾಂಪಿಯನ್ ಆಗಿದ್ದ ಸ್ಟೆಫಿ ಗ್ರಾಫ್‌ರನ್ನು ಸೋಲಿಸಿ ದಾಖಲೆ ಬರೆದಿದ್ದರು.ಕಳೆದ ವರ್ಷ ಅಚ್ಚರಿಯ ರೀತಿಯಲ್ಲಿ ಪ್ರಶಸ್ತಿ ಜಯಿಸಿ, ಚಾಂಪಿಯನ್ ಆದ ಮೊದಲ ಶ್ರೇಯಾಂಕ ರಹಿತ ಆಟಗಾರ್ತಿ ಎನ್ನುವ ದಾಖಲೆ ಬರೆದಿದ್ದ ಮಾರ್ಕೆಟಾ, ನಿರೀಕ್ಷೆ ಉಳಿಸಿಕೊಳ್ಳಲು ವಿಫಲರಾದರು. 2019ರ ಫ್ರೆಂಚ್ ಓಪನ್‌ನಲ್ಲಿ ರನ್ನರ್-ಅಪ್ ಆಗಿದ್ದ ಮಾರ್ಕೆಟಾ, 2021ರ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಪಡೆದಿದ್ದರು.ಜೋಕೋಗೆ ಸುಲಭ ಜಯಫ್ರೆಂಚ್ ಓಪನ್ ಕ್ವಾರ್ಟರ್ ಫೈನಲ್ ವೇಳೆ ಮಂಡಿ ಗಾಯಕ್ಕೆ ತುತ್ತಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸರ್ಬಿಯಾದ ನೋವಾಕ್ ಜೋಕೋವಿಚ್, ಮೊದಲ ಸುತ್ತಿನಲ್ಲಿ ಸುಲಭ ಜಯ ಸಾಧಿಸಿದರು. ಚೆಕ್ ಗಣರಾಜ್ಯದ ವಿಟ್ ಕೊಪ್ರಿವಾ ವಿರುದ್ಧ 6-1, 6-2, 6-2 ನೇರ ಸೆಟ್‌ಗಳಲ್ಲಿ ಗೆದ್ದು ಮುನ್ನಡೆದರು. 4ನೇ ಶ್ರೇಯಾಂಕಿತ ಜರ್ಮನಿಯ ಅಲೆಕ್ಸಾಂಡರ್ ಜೆರೆವ್ ಸಹ 2ನೇ ಸುತ್ತು ಪ್ರವೇಶಿಸಿದರು.
ಮಹಿಳಾ ಸಿಂಗಲ್ಸ್‌ನಲ್ಲಿ 2022ರ ಚಾಂಪಿಯನ್ ಕಜಕಸ್ತಾನದ ಎಲೆನಾ ರಬೈಕೆನಾ, ರೊಮೇನಿಯಾದ ಎಲೆನಾ ರ್‍ಯುಸ್ ವಿರುದ್ಧ 6-3, 6-1ರಲ್ಲಿ ಗೆದ್ದು 2ನೇ ಸುತ್ತು ಪ್ರವೇಶಿಸಿದರು.ಮೊದಲ ಸುತ್ತಿನಲ್ಲೇ ಸೋತ ನಗಾಲ್ಪ್ರಧಾನ ಸುತ್ತಿಗೆ ನೇರ ಅರ್ಹತೆ ಪಡೆದಿದ್ದ ಭಾರತದ ಸುಮಿತ್ ನಗಾಲ್ ಮೊದಲ ಸುತ್ತಿನಲ್ಲೇ ಸೋತು ಹೊರಬಿದ್ದಿದ್ದಾರೆ. ಸೋಮವಾರ ರಾತ್ರಿ ನಡೆದ ಪಂದ್ಯದಲ್ಲಿ ಸರ್ಬಿಯಾದ ಮಿಯೊಮಿರ್ ಕೆಚ್ಮನೊವಿಚ್ ವಿರುದ್ಧ 2-6, 6-3, 3-6, 4-6 ಸೆಟ್‌ಗಳಲ್ಲಿ ಪರಾಭವಗೊಂಡರು.