ಸಾರಾಂಶ
ಕಳೆದ ಬಾರಿ ತಂಡ ಫೈನಲ್‌ಗೇರಲು ಪ್ರಮುಖ ಪಾತ್ರ ವಹಿಸಿದ್ದ ಕಾನ್‌ವೇ ಹೊರಬೀಳುವುದರಿಂದ ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್‌ಗೆ ಹಿನ್ನಡೆ ಉಂಟಾಗುವ ಸಾಧ್ಯತೆ ಇದೆ. ತಂಡ ಬದಲಿ ಆಟಗಾರನನ್ನು ಸೇರ್ಪಡೆ ಮಾಡಿಕೊಳ್ಳುವ ನಿರೀಕ್ಷೆ ಇದೆ.
ವೆಲ್ಲಿಂಗ್ಟನ್: ನ್ಯೂಜಿಲೆಂಡ್‌ನ ಆರಂಭಿಕ ಬ್ಯಾಟರ್ ಡೆವೊನ್ ಕಾನ್‌ವೇ ಎಡಗೈ ಹೆಬ್ಬೆರಳಿನ ಗಾಯಕ್ಕೆ ತುತ್ತಾಗಿದ್ದು, ಮುಂಬರುವ ಐಪಿಎಲ್ 17ನೇ ಆವೃತ್ತಿಯಿಂದ ಅವರು ಹೊರಗುಳಿಯುವುದು ಬಹುತೇಕ ಖಚಿತವೆನಿಸಿದೆ. ಕಾನ್‌ವೇ ಹೊರಬೀಳುವುದರಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಹಿನ್ನಡೆ ಉಂಟಾಗುವ ಸಾಧ್ಯತೆ ಇದ್ದು, ಬದಲಿ ಆಟಗಾರನನ್ನು ಸೇರ್ಪಡೆ ಮಾಡಿಕೊಳ್ಳುವ ನಿರೀಕ್ಷೆ ಇದೆ. ಕಳೆದ ತಿಂಗಳು ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿ ವೇಳೆ ಗಾಯಗೊಂಡಿದ್ದ ಕಾನ್‌ವೇ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದು, ಕನಿಷ್ಠ 8 ವಾರಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿಯಲಿದ್ದಾರೆ ಎಂದು ತಿಳಿದುಬಂದಿದೆ.ಬ್ಯಾಡ್ಮಿಂಟನ್‌ಗೆ ನಿವೃತ್ತಿ ಹೇಳಿದ ಸಾಯಿ ಪ್ರಣೀತ್
ನವದೆಹಲಿ: ವಿಶ್ವ ಚಾಂಪಿಯನ್‌ಶಿಪ್ ಕಂಚಿನ ಪದಕ ವಿಜೇತ ಭಾರತದ ತಾರಾ ಶಟ್ಲರ್ ಸಾಯಿ ಪ್ರಣೀತ್ ಅವರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್‌ಗೆ ಸೋಮವಾರ ನಿವೃತ್ತಿ ಘೋಷಿಸಿದ್ದಾರೆ. 31 ವರ್ಷದ ಪ್ರಣೀತ್ ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪಾಲ್ಗೊಂಡ ಬಳಿಕ ಸತತವಾಗಿ ಗಾಯದಿಂದ ಬಳಲುತ್ತಿದ್ದಾರೆ. ಇನ್ನು ಮುಂದೆ ಅಮೆರಿಕದಲ್ಲಿ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ಕೋಚ್ ಆಗಿ ಕಾರ್ಯನಿರ್ವಹಿಸುವುದಾಗಿ ಪ್ರಣೀತ್ ತಿಳಿಸಿದ್ದಾರೆ. 2017ರಲ್ಲಿ ಪ್ರಣೀತ್ ಸಿಂಗಾಪೂರ ಓಪನ್ ಗೆದ್ದಿದ್ದಾರೆ.