ಆತ್ಮಸ್ಥೈರ್ಯ ಇದ್ದಲ್ಲಿ ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗದು

| Published : Nov 24 2023, 01:30 AM IST

ಆತ್ಮಸ್ಥೈರ್ಯ ಇದ್ದಲ್ಲಿ ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗದು
Share this Article
  • FB
  • TW
  • Linkdin
  • Email

ಸಾರಾಂಶ

ಆತ್ಮಸ್ಥೈರ್ಯ ಇದ್ದಲ್ಲಿ ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗದು

ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಆಚಲ ನಿರ್ಧಾರ, ಆತ್ಮವಿಶ್ವಾಸ, ಸಮಸ್ಯೆಗಳನ್ನು ಮೆಟ್ಟಿನಿಲ್ಲುವ ಆತ್ಮಸ್ಥೈರ್ಯ ಇದ್ದಲ್ಲಿ ಸಾಧನೆಗೆ ಅಂಗವೈಕಲ್ಯ ಅಡ್ಡಿಯಾಗದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎಂ.ವಿಜಯ್ ಹೇಳಿದರು.

ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕಾನೂನು ಸೇವೆಗಳ ಪ್ರಾಧಿಕಾದ ವತಿಯಿಂದ ಹಮ್ಮಿಕೊಂಡಿದ್ದ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿಕಲಚೇತನರಾಗಿದ್ದರೂ ಬಹಳಷ್ಟು ಮಂದಿ ಐಎಎಸ್ ಪರೀಕ್ಷೆಯನ್ನೂ ಪಾಸ್ ಮಾಡಿದ್ದಾರೆ. ಪ್ಯಾರಾ ಒಲಂಪಿಕ್ ಕ್ರೀಡಾಕೂಟದಲ್ಲೂ ಉತ್ತಮ ಸಾಧನೆ ತೋರಿದ್ದಾರೆ. ಹಾಗಾಗಿ ಸಾಧನೆ ಮಾಡಬೇಕು ಎಂದು ಛಲ ಹೊಂದಿದ್ದರೆ ಅಂಗವೈಕಲ್ಯತೆ ಅಡ್ಡಿಯಾಗಲಾರದು. ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಕಲಚೇತನರು ತುಂಬಾ ಉತ್ಸಾಹ ಹಾಗೂ ಕ್ರೀಡಾಸ್ಫೂರ್ತಿಯಿಂದ ಭಾಗವಹಿಸಬೇಕು ಎಂದು ಸಲಹೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನಿರೂಪಣಾಧಿಕಾರಿ ವಿಜಯಕುಮಾರ್ ಮಾತನಾಡಿ, ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಕಲಚೇತನರು ಸಂತೋಷ ಹಾಗೂ ಉತ್ಸಾಹದಿಂದ ಭಾಗವಹಿಸಬೇಕು. ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ ಎಂದು ಹೇಳಿದರು.

ನಗರದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಗಮನಸೆಳೆದವು. 18 ರಿಂದ 45 ವರ್ಷ ವಯೋಮಿತಿಯ ಅಂಧರಿಗೆ ಮಡಿಕೆ ಒಡೆಯುವುದು, ಕೇನ್ ರೇಸ್ ಸ್ಪರ್ಧೆ, ಶ್ರವಣ ದೋಷವುಳ್ಳವರಿಗೆ 100 ಮೀ ಓಟ, ಗುಂಡು ಎಸೆತ, ಜಾವಲಿನ್ ಥ್ರೋ ಸ್ಪರ್ಧೆ, ದೈಹಿಕ ವಿಕಲಚೇತನರಿಗೆ 100 ಮೀ ಓಟ, ಗುಂಡು ಎಸೆತ, ಜಾವಲಿನ್ ಥ್ರೋ, ಬುದ್ಧಿಮಾಂದ್ಯರಿಗೆ 100 ಮೀ. ಓಟ, ಬಕೆಟ್‍ನಲ್ಲಿ ರಿಂಗ್ ಎಸೆತ, ಮ್ಯೂಜಿಕಲ್ ಚೇರ್ ಸ್ಪರ್ಧೆ ಆಯೋಜಿಸಲಾಗಿತ್ತು. ಈ ಎಲ್ಲ ಸ್ಪರ್ಧೆಗಳಲ್ಲಿ ವಿಕಲಚೇತನರು ಭಾಗವಹಿಸಿ ಗೆಲುವಿಗಾಗಿ ಸೆಣೆಸಾಡಿದರು.

18 ರಿಂದ 45 ವರ್ಷ ವಯೋಮಿತಿಯೊಳಗಿನ ದೃಷ್ಟಿದೋಷ ಮತ್ತು ದೈಹಿಕ ವಿಕಲಚೇತನರು ಮತ್ತು ಬುದ್ಧಿಮಾಂದ್ಯರಿರುವವರಿಗೆ ಜಾನಪದ ಗೀತೆ, ಭಾವಗೀತೆ, ಭಕ್ತಿಗೀತೆ ಸ್ಪರ್ಧೆಗಳು ನಡೆದವು.

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎ.ಎಂ. ವೀಣಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಹಿಳಾ ಅಭಿವೃದ್ಧಿ ಅಧಿಕಾರಿ ಪವಿತ್ರಾ, ಶಾಲಾ ಶಿಕ್ಷಣ ಇಲಾಖೆಯ ಚಿದಾನಂದ, ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಜಯಣ್ಣ ಸೇರಿದಂತೆ ಎಂಆರ್‌ಡಬ್ಲ್ಯೂ, ವಿಆರ್‌ಡಬ್ಲ್ಯೂ, ಯುಆರ್‌ಡಬ್ಲ್ಯೂ ಕಾರ್ಯಕರ್ತರು ಹಾಗೂ ವಿಕಲಚೇತನರು ಇದ್ದರು.

- - -

ಚಿತ್ರದುರ್ಗದ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ವಿಕಲಚೇತನರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಹಿರಿಯ ಸಿವಿಲ್ ನ್ಯಾಯಾಧೀಶ ಎಂ.ವಿಜಯ್ ಉದ್ಘಾಟಿಸಿದರು.

- - -

23 ಸಿಟಿಡಿ1

- -