ಸಾರಾಂಶ
ಖೇಲೋ ಇಂಡಿಯಾ ವಿವಿ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ನರೇಂದ್ರ ಮೋದಿ ಯುವ ಕ್ರೀಡಾಪಟುಗಳನ್ನು ಹುರಿದುಂಬಿಸಿದ್ದಾರೆ.
ಗುವಾಹಟಿ: ಸೋಲುಗಳಿಂದ ಬೇಸರಗೊಳ್ಳಬೇಡಿ. ಸೋಲನ್ನು ಕಲಿಕೆಗೆ ಇರುವ ಅವಕಾಶವಾಗಿ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಸೋಮವಾರ 4ನೇ ಆವೃತ್ತಿ ಖೇಲೋ ಇಂಡಿಯಾ ವಿವಿ ಗೇಮ್ಸ್ ಉದ್ಘಾಟನಾ ಸಮಾರಂಭದಲ್ಲಿ ವಿಡಿಯೋ ಸಂದೇಶದ ಮೂಲಕ ಯುವ ಕ್ರೀಡಾಪಟುಗಳನ್ನು ಹುರಿದುಂಬಿಸಿದರು.
‘ಪೋಷಕರು ಈಗ ಬದಲಾಗಿದ್ದಾರೆ. ಮೊದಲು ಕ್ರೀಡೆಯಿಂದ ತಮ್ಮ ಮಕ್ಕಳ ಶೈಕ್ಷಣಿಕ ಜೀವನ ಹಾಳಾಗುತ್ತದೆ ಎಂದು ಭಯಪಡುತ್ತಿದ್ದರು.
ಶೈಕ್ಷಣಿಕ ಸಾಧನೆ ಸಂಭ್ರಮಿಸುವ ಜೊತೆಗೆ ಕ್ರೀಡಾ ಸಾಧನೆಗಳನ್ನು ಕೂಡಾ ಸಂಭ್ರಮಿಸುವ ಪರಿಪಾಠ ಬೆಳೆಸಿಕೊಳ್ಳಬೇಕು ಎಂದರು.
ಕ್ರೀಡಾಕೂಟಕ್ಕೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಚಾಲನೆ ನೀಡಿದರು.
ಅಸ್ಸಾಂ, ಅರುಣಾಚಲ ಪ್ರದೇಶ, ಮೇಘಾಲಯ, ಮಿಜೋರಾಂ. ಸಿಕ್ಕಿಂ, ನಾಗಲ್ಯಾಂಡ್ ಹಾಗೂ ತ್ರಿಪುರಾದಲ್ಲಿ ಗೇಮ್ಸ್ ನಡೆಯಲಿದ್ದು, 4500+ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ.